8:20 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ

09/04/2026, 20:28

ಮಂಗಳೂರು(reporterkarnataka.com): ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ- ಕರ್ನಾಟಕ (ಎನ್‌ಐಟಿಕೆ)ದ ಮಾಜಿ ಕುಲಸಚಿವೊಬ್ಬರನ್ನು ಆಡಳಿತಾತ್ಮಕ ಅಕ್ರಮದ ಆರೋಪದ ಮೇಲೆ ಆಡಳಿತ ಮಂಡಳಿಯು ಸೇವೆಯಿಂದ ವಜಾಗೊಳಿಸಿದೆ.
ಎನ್‌ಐಟಿಕೆ ಆಡಳಿತ ಮಂಡಳಿಯ ಮಾಜಿ ಕುಲಸಚಿವ ರವೀಂದ್ರನಾಥ್ ಕೆ. ಸೇವೆಯಿಂದ ವಜಾಗೊಂಡವರು. ಕೇಂದ್ರ ಶಿಕ್ಷಣ ಸಚಿವಾಲಯದ ನಿರ್ದೇಶನದ ಮೇರೆಗೆ ಹಾಗೂ ಆಡಳಿತ ಮಂಡಳಿಯ ನಿರ್ಣಯದಂತೆ 2025ರ ಸೆ. 12ರಿಂದ ಅವರು ಸೇವೆಯಿಂದ ಅಮಾನತುಗೊಂಡಿದ್ದರು. ಬಳಿಕ ಅವರ ವಿರುದ್ಧದ ಆರೋಪಗಳ ಬಗ್ಗೆ ಇಲಾಖಾ ತನಿಖೆ ಪ್ರಾರಂಭವಾಗಿತ್ತು. 1964ರ ಕೇಂದ್ರ ನಾಗರಿಕ ಸೇವಾ (ನಡವಳಿಕೆ) ನಿಯಮಗಳ ಉಲ್ಲಂಘನೆ, ಕೆಲವು ಪ್ರಕ್ರಿಯೆಗಳನ್ನು ಅಕ್ರಮವಾಗಿ ನಡೆಸಿರುವುದು ಹಾಗೂ ವೃತ್ತಿಪರವಲ್ಲದ ಅಸಭ್ಯ ನಡವಳಿಕೆ ಆರೋಪಗಳು ಅವರ ಮೇಲಿದ್ದು, ಅವುಗಳ ಕುರಿತು ತನಿಖೆ ನಡೆದಿತ್ತು.
‘ರವೀಂದ್ರನಾಥ್‌ ಕೆ. ಮೇಲಿನ ಆರೋಪಗಳು ಸಾಬೀತಾಗಿರುವುದರಿಂದ, ಅವರನ್ನು ಸೇವೆಯಿಂದ ವಜಾ ಮಾಡಲು ಆಡಳಿತ ಮಂಡಳಿಯು ಸರ್ವಾನುಮತದ ನಿರ್ಣಯ ಕೈಗೊಂಡಿದೆ. 2007ರ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ, ವಿಜ್ಞಾನ ಶಿಕ್ಷಣ ಮತ್ತು ಸಂಶೋಧನೆ ಕಾಯ್ದೆ (ಎನ್‌ಐಟಿಎಸ್‌ಇಆರ್‌) ಮತ್ತು ಅದರ ನಿಯಮಗಳ ಪ್ರಕಾರ ಯಾವುದೇ ವ್ಯಕ್ತಿ ಕುಲಸಚಿವ ಹುದ್ದೆಯಲ್ಲಿ 5 ವರ್ಷಕ್ಕಿಂತ ಹೆಚ್ಚು ಕಾಲ ಮುಂದುವರಿಯಲು ಅವಕಾಶವಿಲ್ಲ. ಐದು ವರ್ಷಕ್ಕಿಂತಲೂ ಹೆಚ್ಚು ಸಮಯ ಕುಲಸಚಿವ ಹುದ್ದೆಯಲ್ಲಿದ್ದ ಕಾರಣ ಅವರ ಅವಧಿಯನ್ನು ಸೇವೆಯಿಂದ ವಜಾಗೊಳಿಸುವ ನಿರ್ಧಾರ ಕೈಗೊಳ್ಳುವುದಕ್ಕೂ ಮುನ್ನವೇ ಮುಕ್ತಾಯಗೊಳಿಸಲಾಗಿದೆ.’
ಸಂಸ್ಥೆಯು ಯಾವುದೇ ರೀತಿಯ ಅಕ್ರಮ ಅಥವಾ ಅನೈತಿಕ ನಡವಳಿಕೆಯನ್ನು ಸಹಿಸುವುದಿಲ್ಲ. ಆಡಳಿತದಲ್ಲಿ ಸಮಗ್ರತೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಎನ್‌ಐಟಿಕೆ ಬದ್ಧತೆಯನ್ನು ಈ ಕ್ರಮವು ಎತ್ತಿ ಹಿಡಿದಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು