1:31 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸುರೇಶ್‌ ಪಳ್ಳಿ, ಭರತ್‌ರಾಜ್‌ ಸನಿಲ್‌ ಗೆ ‘ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿ’: ಜುಲೈ 1ರಂದು ಪ್ರದಾನ

27/06/2023, 19:11

ಮಂಗಳೂರು(reporterkarnataka.com): ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಪ್ರತಿ ಬಿಂಬಿಸುವ ವರದಿಗೆ ನೀಡಲಾಗುವ ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿಗೆ ಪತ್ರಿಕಾ ಮಾಧ್ಯಮ ವಿಭಾಗದಲ್ಲಿ ಹೊಸದಿಗಂತ ವರದಿಗಾರ ಸುರೇಶ್‌ ಡಿ.ಪಳ್ಳಿ ಮತ್ತು ದೃಶ್ಯ ಮಾಧ್ಯಮ ವಿಭಾಗದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿಗಾರ ಭರತ್‌ರಾಜ್‌ ಕೆ. ಸನಿಲ್‌ ಆಯ್ಕೆಯಾಗಿದ್ದಾರೆ.
ಹೊಸದಿಗಂತ ಪತ್ರಿಕೆಯಲ್ಲಿ 2022ರ ಜೂ.13ರಂದು ಪ್ರಕಟಗೊಂಡ “ಮತ್ತೆ ಒಂದಾಗಲಿ ಒಡೆದ ಮನಸ್ಸುಗಳು” ಮತ್ತು ಸುವರ್ಣ ನ್ಯೂಸ್‌ನಲ್ಲಿ 2022ರ ಏ.19ರಂದು ಪ್ರಸಾರಗೊಂಡ ‘ಹಿಂದೂ ಕುಶಲಕರ್ಮಿಯ ಕೈಚಳಕ, ಕೋಮು ಸೂಕ್ಷ್ಮಮಂಗಳೂರಿನ ಸೌಹಾರ್ದತೆಯ ಕಥೆ” ವಿಶೇಷ ವರದಿಗೆ ಪ್ರಶಸ್ತಿ ಲಭಿಸಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೀರ್ಪುಗಾರರಾಗಿ ಪತ್ರಿಕಾ ವಿಭಾಗದಲ್ಲಿ ಹಿರಿಯ ಪತ್ರಕರ್ತ ಹಿಲರಿ ಕ್ರಾಸ್ತ, ರಂಗ ಸಾಹಿತಿ, ನ್ಯಾಯವಾದಿ ಶಶಿರಾಜ್‌ ಕಾವೂರು, ಕರಾವಳಿ ಲೇಖಕಿ ಮತ್ತು ವಾಚಕಿಯರ ಸಂಘದ ಅಧ್ಯಕ್ಷೆ ಜ್ಯೋತಿ ಚೆಳ್ಯಾರು, ದೃಶ್ಯ ಮಾಧ್ಯಮ ವಿಭಾಗದಲ್ಲಿ ಉಜಿರೆ ಎಸ್‌ಡಿಎಂ ಪತ್ರಿಕೋದ್ಯಮ ಉಪನ್ಯಾಸಕ ಸುನಿಲ್‌ ಹೆಗ್ಡೆ, ನಮ್ಮ ಕುಡ್ಲ ವಾಹಿನಿಯ ಹಿರಿಯ ಪತ್ರಕರ್ತ ಲ್ಯಾನ್ಸಿ ಡಿಸೋಜ ಸಹಕರಿಸಿದ್ದರು.
ಜು.1ರಂದು ಪೂರ್ವಾಹ್ನ 11 ಗಂಟೆಗೆ ಪತ್ರಿಕಾಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪೊಲೀಸ್‌ ಕಮಿಷನರ್‌ ಕುಲದೀಪ್‌ ಜೈನ್‌, ಆಕಾಶವಾಣಿ ನಿವೃತ್ತ ಅಧಿಕಾರಿ ಸದಾನಂದ ಪೆರ್ಲ ಪ್ರಶಸ್ತಿ ಪ್ರದಾನ ಮಾಡುವರು.
ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಅಧ್ಯಕ್ಷತೆ ವಹಿಸುವರು. ಪ್ರೆಸ್‌ಕ್ಲಬ್‌ ಅಧ್ಯಕ್ಷ ಪಿ.ಬಿ.ಹರೀಶ್‌ ರೈ, ಪತ್ರಿಕಾಭವನ ಟ್ರಸ್ಟ್‌ ಅಧ್ಯಕ್ಷ ರಾಮಕೃಷ್ಣ ಆರ್.‌ ಉಪಸ್ಥಿತರಿರುವರು.
ಸುರೇಶ್ ಡಿ. ಪಳ್ಳಿ: ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದವರು. ಸಮೂಹ ಸಂಹವನ ಮತ್ತು ಪತ್ರಿಕೋದ್ಯಮ-ಸ್ನಾತಕೋತ್ತರ ಪದವೀಧರರು. 16 ವರ್ಷಗಳಿಂದ ಹೊಸ ದಿಗಂತ ಪತ್ರಿಕೆಯ ಮಂಗಳೂರು ವಿಭಾಗದಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2013ನೆಯ ಸಾಲಿನ ಪದ್ಯಾಣ ಗೋಪಾಲಕೃಷ್ಣ (ಪ.ಗೋ) ಪ್ರಶಸ್ತಿಗೆ ಭಾಜನರಾಗಿದ್ದರು. ಇವರ ವಿಶೇಷ ವರದಿಯೊಂದು ಅಖಿಲ ಭಾರತ ಮಟ್ಟದ-ಜಾಗತಿಕ ಸಮಾಜ ಕಾರ್ಯ ಸಂಸ್ಥೆ ಪ್ರಕಟಿಸುವ ‘ಹಂಗರ್ ಪ್ರಾಜೆಕ್ಟ್’ನ ಪುಸ್ತಕದಲ್ಲಿ ಆಂಗ್ಲ ಭಾಷೆಗೆ ತರ್ಜುಮೆಗೊಂಡು ಪ್ರಕಟವಾಗಿದೆ.
ಭರತ್‌ರಾಜ್ ಸನಿಲ್: ಕುಂಪಲದ ಭರತ್‌ರಾಜ್‌ ಅವರಿಗೆ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ. 18ನೇ ವಯಸ್ಸಿನಲ್ಲೇ ಜಯಕಿರಣ ಪತ್ರಿಕೆಯಲ್ಲಿ ಪತ್ರಿಕೋದ್ಯಮ ಆರಂಭಿಸಿ ಬಳಿಕ ದೂರ ಶಿಕ್ಷಣದಲ್ಲಿ ಬಿಎ ಪತ್ರಿಕೋದ್ಯಮ ಪದವಿ ಪೂರೈಸಿದರು. ಬಿಟಿವಿ ನ್ಯೂಸ್ ಜಿಲ್ಲಾ ‌ವರದಿಗಾರನಾಗಿ ಬಳಿಕ 2017ರಿಂದ ಸುವರ್ಣ ನ್ಯೂಸ್‌ನಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು