5:08 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ಸುರತ್ಕಲ್ ಅನಧಿಕೃತ ಟೋಲ್ ಗೇಟ್ ತೆರವಿಗೆ ತಕ್ಷಣ ಕ್ರಮ ಕೈಗೊಳ್ಳಿ: ವಿಧಾನಸಭೆಯಲ್ಲಿ ಯು.ಟಿ. ಖಾದರ್ ಒತ್ತಾಯ

15/09/2022, 21:45

ಬೆಂಗಳೂರು(reporterkarnataka.com): ಸುರತ್ಕಲ್ ನಲ್ಲಿರುವ ಅನಧಿಕೃತ ಟೋಲ್ ಗೇಟ್ ತೆರವುಗೊಳಿಸಲು ಆಗ್ರಹಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದು, ಟೋಲ್ ಗೇಟ್ ತೆರವಿಗೆ ಸರಕಾರ ತಕ್ಷಣ ಕ್ರಮ ಕೈಗೊಳ್ಳ ಬೇಕು’ ಎಂದು ವಿಧಾನ ಸಭೆ ಪ್ರತಿಪಕ್ಷದ ಉಪ ನಾಯಕ ಯು.ಟಿ ಖಾದರ್ ಹೇಳಿದರು.

ವಿಧಾನಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಯು.ಟಿ ಖಾದರ್, ‘ಕಾನೂನು ಪ್ರಕಾರ 60 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಒಂದು ಟೋಲ್ ಗೇಟ್ ಇರಬೇಕು, ಆದರೆ, ತಲಪಾಡಿಯಿಂದ ಸುರತ್ಕಲ್ ಗೆ 30 ಕಿಲೋ ಮೀಟರ್ ಇದ್ದು, ಈ ಪ್ರದೇಶದಲ್ಲಿ ಒಟ್ಟು 3 ಟೋಲ್ ಗೇಟ್ ಬರುತ್ತೆ. 60 ಕಿಲೋ ಮೀಟರ್ ಗಳ ಒಳಗೆ ಟೋಲ್‍ಗೇಟ್‍ಗಳು ಅತ್ಯಂತ ಸಮೀಪದಲ್ಲೇ ಹಾಕಲಾಗಿದೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದ್ದು, ಇದರ ತೆರವಿಗೆ ಸಚಿವರು ಸಂಪೂರ್ಣ ಮೇಲುಸ್ತುವಾರಿ ವಹಿಸಿಕೊಳ್ಳಬೇಕು’ ಎಂದು ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಅವರನ್ನು ಒತ್ತಾಯಿಸಿದರು.

ಬಳಿಕ ಪ್ರತಿಕ್ರಿಯಿಸಿದ ಸಚಿವ ಸಿ.ಸಿ ಪಾಟೀಲ್, ‘ 60 ಕಿಲೋ ಮೀಟರ್ ಅಂತರದಲ್ಲಿರುವ ಟೋಲ್ ಗೇಟ್ ಗಳನ್ನು ವಿಲೀನಗೊಳಿಸಲು ಅವಕಾಶವಿದೆ. ಸುರತ್ಕಲ್ ಟೋಲ್ ಗೇಟ್ ಸೇರಿದಂತೆ ರಾಜ್ಯದ 60 ಕಿಲೋ ಮೀಟರ್ ಅಂತರದಲ್ಲಿರುವ ಟೋಲ್ ಪ್ಲಾಝಾಗಳನ್ನು ವಿಲೀನಗೊಳಿಸುವ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಸಚಿವ ನಿತಿನ್ ಗಡ್ಕರಿ ಅವರೂ ಒಪ್ಪಿಕೊಂಡಿದ್ದಾರೆ. ಕಾನೂನು ಬಾಹಿರ  ಟೋಲ್ ಗೇಟ್ ತೆರವುಗೊಳಿಸಲು ಸರಕಾರ ಬದ್ಧವಾಗಿದೆ’ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು