1:43 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಸುರತ್ಕಲ್ ರಾಷ್ಟ್ರಭಕ್ತ ನಾಗರಿಕ  ವೇದಿಕೆಯಿಂದ ಜು.26ರಂದು ಕಾರ್ಗಿಲ್ ವಿಜಯೋತ್ಸವ: ಸೈನಿಕ ಕಲ್ಯಾಣ ನಿಧಿ ವಿತರಣೆ

23/07/2021, 18:04

ಸುರತ್ಕಲ್(reporterkarnataka news); ಸುರತ್ಕಲ್ ರಾಷ್ಟ್ರಭಕ್ತ ನಾಗರಿಕ ವೇದಿಕೆಯ ವತಿಯಿಂದ ಕಳೆದ 7 ವರ್ಷಗಳಿಂದ ನಿರಂತರ ಕಾರ್ಗಿಲ್ ವಿಜಯೋತ್ಸವ ನಡೆಸುತ್ತಿದ್ದು ಜು.26ರಂದು ಇಲ್ಲಿನ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಬಾರಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭದಲ್ಲಿ ಅರ್ಹ 14 ಸೈನಿಕ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ವಿತರಣೆ ನಡೆಯಲಿದೆ ಎಂದು ರಾಷ್ಟ್ರಭಕ್ತ ನಾಗರಿಕ ವೇದಿಕೆಯ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ತಿಳಿಸಿದರು. 

ಅವರು ಶುಕ್ರವಾರದಂದು ಸುರತ್ಕಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೊರೊನಾ ಸಮಸ್ಯೆಯಿಂದಾಗಿ ಈ ಬಾರಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಸೈನಿಕರಿಗೆ ಹಾಗೂ ಸೈನ್ಯದ ಹೋರಾಟಕ್ಕೆ ಸಂಬಂಧಿಸಿದ ಪುಸ್ತಕಗಳ ಮೇಲೆ ನಡೆಸುತ್ತಿದ್ದ ಭಾಷಣ ಮತ್ತು ಪ್ರಬಂಧ ಸ್ಪರ್ಧೆ ನಡೆಸಲಾಗಿಲ್ಲ‌‌. ಕಾರ್ಯಕ್ರಮದಲ್ಲಿ  ಸೈನಿಕರ ಸ್ಮರಣೆ, ಸನ್ಮಾನ ಮತ್ತು ಸೈನಿಕ ಕುಟುಂಬಗಳಿಗೆ ನೆರವು ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಬಾರಿಯೂ 40 ಸೈನಿಕರಿಗೆ ಗೌರವಾರ್ಪಣೆ, 4 ಸೈನಿಕರಿಗೆ ಸನ್ಮಾನ, ಸೈನಿಕ ನಿಧಿ ಅರ್ಪಣೆ ಕಾರ್ಯಕ್ರಮ ನಡೆಯಲಿದೆ. ಜು. 26ರ ಸಂಜೆ 6 ಗಂಟೆಗೆ ಇಡ್ಯಾ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಐ. ರಮಾನಂದ ಭಟ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು,  ಒ ಎಂ ಪಿ ಎಲ್ ನಿವೃತ್ತ ಕಾರ್ಯ ನಿರ್ವಹಣಾಧಿಕಾರಿ ಎಸ್.ಎಸ್. ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಭೂಸೇನಾ ಯೋಧ ನಾಯಕ್ ಪ್ರವೀಣ್ ಕುಮಾರ್ ಶೆಟ್ಟಿ, ಕಿಶನ್ ಕುಮಾರ್ ರಾವ್, ನೌಕಾಸೇನಾ ಯೋಧ 

ಸಿಪಿಓ ವಿಜಯನ್ ಕೆ., ವಾಯುಸೇನಾ ಯೋಧ ಜೆಡಬ್ಲ್ಯೂಒ ಅರವಿಂದ್ ಭಟ್ ಸನ್ಮಾನ ಸ್ವೀಕರಿಸಲಿದ್ದಾರೆ. ಕಾರ್ಗಿಲ್ ಯುದ್ಧದಲ್ಲಿ ಆಪರೇಷನ್ ವಿಜಯ್ ಮತ್ತು ಆಪರೇಷನ್ ವಿಜಯ್ ಸ್ಟಾರ್ ನಲ್ಲಿ ಮುಂಚೂಣಿಯಲ್ಲಿ ಭಾಗವಹಿಸಿ ಕಾರ್ಗಿಲ್ ವಾರ್ ಮೆಡಲ್ ಪುರಸ್ಕೃತರಾದ ನಾಯಕ್ ಪ್ರವೀಣ್ ಕುಮಾರ್ ಶೆಟ್ಟಿ ಕಾರ್ಗಿಲ್ ಯುದ್ಧದಲ್ಲಿ ತಾವು ಭಾಗವಹಿಸಿದ್ದ

ಕ್ಷಣವನ್ನು ತಿಳಿಸಲಿದ್ದಾರೆ ಎಂದರು‌‌. ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ, ಪ್ರಧಾನ ಕಾರ್ಯದರ್ಶಿ ಮಹೇಶ್ ಮೂರ್ತಿ ಸುರತ್ಕಲ್, ಉಪಾಧ್ಯಕ್ಷರಾದ ಯಶಪಾಲ್ ಸಾಲ್ಯಾನ್ ಚಿತ್ರಾಪುರ, ಲೋಕೇಶ್ ಕೋಡಿಕೆರೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು