10:05 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್

22/04/2026, 15:02

ಬೆಂಗಳೂರು(reporterkarnataka.com): ಅಮಾನತು ಅಂತ್ಯವಲ್ಲ, ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಂಡಿರುವ ಅಬ್ದುಲ್ ಜಬ್ಬಾರ್ ಅವರಿಗೆ ಇನ್ನೂ ಅವಕಾಶ ಇದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ರಾವ್ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಬ್ಬಾರ್ ಅಮಾನತುಗೊಂಡಿದ್ದಾರೆ. ಆದರೆ, ಅವರು ಇನ್ನೂ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಅವರನ್ನು ಮೂರೂ ಬಾರಿ ಎಂಎಲ್ಸಿಯಾಗಿ ಮಾಡಿದ್ದು ಪಕ್ಷವೇ. ಅವರು ತಮ್ಮ ಸ್ಪಷ್ಟನೆ ನೀಡಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಬಹುದು” ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರಗಳ ಬಗ್ಗೆ ಮಾತನಾಡಿ, “ನಸೀರ್ ಅಹ್ಮದ್ ಅವರನ್ನು ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದೂ ಮುಖ್ಯಮಂತ್ರಿಗಳೇ. ಅವರನ್ನು ಆ ಹುದ್ದೆಯಿಂದ ತೆಗೆದುಹಾಕುವುದೂ ಸಿಎಂ ನಿರ್ಧಾರ. ಅದರ ಕಾರಣ, ಹಿನ್ನೆಲೆ ವಿವರಗಳು ಮುಖ್ಯಮಂತ್ರಿಗಳಿಗೆ ಮಾತ್ರ ತಿಳಿದಿರುತ್ತದೆ ಎಂದು ತಿಳಿಸಿದರು. ಪಕ್ಷವು ಇಬ್ಬರು ನಾಯಕರಿಗೂ ಮೂರೂ ಬಾರಿ ಎಂಎಲ್ಸಿ ಸ್ಥಾನ ನೀಡಿದ್ದು, ಹಲವು ಜವಾಬ್ದಾರಿಗಳನ್ನು ಒಪ್ಪಿಸಿದೆ. “ಇದು ಯಾವುದೇ ಓಲೈಕೆಯ ರಾಜಕೀಯವಲ್ಲ. ಪಕ್ಷವು ಅವರಿಗೆ ಸಾಕಷ್ಟು ಅವಕಾಶಗಳನ್ನು ನೀಡಿದೆ” ಎಂದು ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು