9:55 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸುತ್ತೂರಿನಲ್ಲಿ 53ನೇ ಜಾನುವಾರು ಜಾತ್ರೆ, ಚಿತ್ರಕಲಾ ಮತ್ತು ಗಾಳಿಪಟ ಸ್ಪರ್ಧೆ ಉದ್ಘಾಟನೆ

09/02/2024, 19:26

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಸಂಜೆ 53ನೇಯ ಜಾನುವಾರು ಜಾತ್ರೆ, ಚಿತ್ರಕಲಾ ಮತ್ತು ಗಾಳಿಪಟ ಸ್ಪರ್ಧೆ ಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.


ಸುತ್ತೂರು ಶ್ರೀಗಳಾದ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಟ್ ಟೇಪ್ ಕತ್ತರಿಸುವ ಮೂಲಕ ಜಾನುವಾರು ಜಾತ್ರೆಯನ್ನು ಉದ್ಘಾಟಿಸಿದರು.
ದನಗಳ ಪರಿಷೆಯಲ್ಲಿ ಶ್ರೀಗಳು ಸೇರಿದಂತೆ ಗಣ್ಯರು ಉತ್ತಮ ರಾಸುಗಳು ಹಾಗೂ ಜೋಡಿಗಳನ್ನು ನೋಡಿ ಖುಷಿಪಟ್ಟು ರಾಸುಗಳ ಮಾಲೀಕರಿಗೆ ಮಾಲಾರ್ಪಣೆ ಮಾಡಿ ಅಭಿನಂದಿಸಿದರು.
ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಚಿತ್ರ ಬಿಡಿಸುವ ಹಾಗೂ ಗಾಳಿಪಟ ಸ್ಪರ್ಧೆಗೆ ಶಾಸಕ ತನ್ವೀರ್ ಸೇಠ್ ಸೇರಿದಂತೆ ಮತ್ತಿತರ ಗಣ್ಯರು ಚಾಲನೆ ನೀಡಿದರು.
ನಂತರ ಶಾಸಕರುಗಳಾದ ತನ್ವೀರ್ ಸೇಠ್ ಹಾಗೂ ಎ ಆರ್ ಕೃಷ್ಣಮೂರ್ತಿ ಮಾತನಾಡಿ ತಮ್ಮ ಮಾತಿನುದ್ದಕ್ಕೂ ಶ್ರೀ ಕ್ಷೇತ್ರದ ಮಹಿಮೆ ಜಾತ್ರೆಯಲ್ಲಿ ಹಮ್ಮಿಕೊಂಡಿರುವ ವೈವಿಧ್ಯಮಯ ಕಾರ್ಯಕ್ರಮಗಳು ಹಾಗೂ ಪರಮ ಪೂಜ್ಯರುಗಳಾದ ಡಾ. ಶ್ರೀ ರಾಜೇಂದ್ರ ಮಹಾಸ್ವಾಮಿಗಳು ಹಾಗೂ ಶ್ರೀ ಶಿವರಾತ್ರಿದೇಶಿ ಕೇಂದ್ರ ಮಹಾಸ್ವಾಮಿಗಳವರ ದೂರ ದೃಷ್ಟಿಯಿಂದ ಇಂದು ನಮ್ಮ ಕರ್ನಾಟಕದಲ್ಲೇ ಅಲ್ಲ ಇಡೀ ವಿಶ್ವದಲ್ಲೇ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮಾಡಿಸಿದ್ದಾರೆ. ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ರೈತರ ಬೆಳೆಗಳಿಗೆ ಹಾಗೂ ಕುಡಿಯುವ ನೀರಿಗಾಗಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳನ್ನು ಸರ್ಕಾರ ಗಳು ಮಾಡಿದ್ದರೆ ಅದಕ್ಕೆ ಶ್ರೀ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಗಳೇ ಕಾರಣ ಎಂದು ಶ್ರೀಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು
ಕಾರ್ಯಕ್ರಮದಲ್ಲಿ ನಿವೃತ್ತ ಜಿಲ್ಲಾಧಿಕಾರಿ ಜಿಎನ್ ಶಿವಮೂರ್ತಿ, ಕರ್ನಾಟಕ ಮಾಹಿತಿ ಆಯೋಗದ ಆಯುಕ್ತರಾದ ಡಿ ಎಸ್ ಬಿ ಬೊಮ್ಮನಳ್ಳಿ, ಹುಬ್ಬಳ್ಳಿಯ ಶ್ರೀ ಶಾಂತಾಶ್ರಮ ಮಠದ ಶ್ರೀ ಅಭಿನವ ಸಿದ್ದಾರೂಢ ಸ್ವಾಮಿಗಳು, ಬೆಳಗಾವಿ ಜಿಲ್ಲೆಯ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮ ಮಠದ ನಿಜಗುಣ ದೇವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು