4:07 PM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಸುವರ್ಣ ಕರ್ನಾಟಕ ಸಂಭ್ರಮ 50: ಮಂಗಳೂರು ಶ್ರೀ ರಾಮಕೃಷ್ಣ ಪಿಯು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆ

19/09/2024, 18:58

ಚಿತ್ರ/ವರದಿ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರು ಶ್ರೀ ರಾಮಕೃಷ್ಣ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ‘ಸುವರ್ಣ ಕರ್ನಾಟಕ ಸಂಭ್ರಮ 50’, “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ “ಶೀರ್ಷಿಕೆಯಡಿಯಲ್ಲಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಮೂಲ್ಕಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಾಸುದೇವ ಬೆಳ್ಳೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ಕರ್ನಾಟಕ ಎನ್ನುದು ಬಹು ಸಂಸ್ಕೃತಿಯುಳ್ಳ ರಾಜ್ಯ. ಕನ್ನಡ ಭಾಷೆ ನಮ್ಮ ಉಸಿರಾಗಬೇಕು.
ಕನ್ನಡ ಅನ್ನುವುದು ಬರೇ ಭಾಷೆ ಅಲ್ಲ, ಕನ್ನಡ ಅನ್ನುವುದು ಸಮಾಜ. ಕರ್ನಾಟಕ ಎಂಬ ಹೆಸರಾಗಿ 50 ವರ್ಷವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರವು ವಿದ್ಯಾರ್ಥಿಗಳಲ್ಲಿ ಭಾಷೆಯ ಅಭಿಮಾನವನ್ನು ಮೂಡಿಸುವವುದಕ್ಕಾಗಿ,ಕನ್ನಡವನ್ನು ಹೇಗೆ ಉಳಿಸಿ ಬೆಳೆಸಬಹುದು, ಕರ್ನಾಟಕಕ್ಕೆ ನಮ್ಮ ಕರಾವಳಿಯ ಏನು ಎನ್ನುದರ ಬಗ್ಗೆ ವಿದ್ಯಾರ್ಥಿಗಳು ತಿಳಿಕೊಳ್ಳಬೇಕು ಎನ್ನುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ರಾಮಕೃಷ್ಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಯಶೋಧಾ ಯು. ಶೆಟ್ಟಿ ವಹಿದ್ದರು.


ಕಾಲೇಜಿನ ಉಪ ಪ್ರಾಂಶುಪಾಲ ಧನರಾಜ್ ಚಿಪ್ಪಾರ್, ಕನ್ನಡ ಉಪನ್ಯಾಸಕಿ ರುಕ್ಮಿಣಿ, ರಾಮಕೃಷ್ಣ ಹೈಸ್ಕೂಲ್ ಉಪ ಪ್ರಾಂಶುಪಾಲೆ ರೂಪಾ, ಪದವಿ ಕಾಲೇಜಿನ ಉಪನ್ಯಾಸಕ ನಟೇಶ್ ಆಳ್ವ ಮತ್ತಿರರು ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ 9 ತಾಲೂಕಿನ ವಿಜೇತ 27 ಸ್ಪರ್ಧಾಳುಗಳು ಭಾಗವಹಿಸಿದ್ದರು.
ಉಪನ್ಯಾಸಕರುಗಳಾದ ರುಕ್ಮಿಣಿ,ನಟೇಶ್ ಆಳ್ವ, ರೂಪ ತೀರ್ಪುಗಾರಾಗಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು