ಇತ್ತೀಚಿನ ಸುದ್ದಿ
ಶ್ವಾಸಕೋಶದ ಸೋಂಕು: ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಆಸ್ಪತ್ರೆಗೆ ದಾಖಲು; ಐಸಿಯುಲ್ಲಿ ಚಿಕಿತ್ಸೆ
25/09/2022, 21:19

ಬೆಂಗಳೂರು(reporterkarnataka.com):ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವ ಎಸ್. ಎಂ ಕೃಷ್ಣ ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಅವರಿಗೆ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸದ್ಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದೆ.
ಕೃಷ್ಣ ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ತಂಡ ಆರೈಕೆ ನೀಡುತ್ತಿದೆ. ಶ್ವಾಸ ಕೋಶದ ಒಳಗಡೆ ಆಕ್ಸಿಜನ್ ಪ್ರಮಾಣ ಏರು ಪೇರು ಆಗ್ತ ಇದ್ದು ವೈದ್ಯರ ತಂಡ ನಿಗಾ ವಹಿಸಿದೆ.
ತೀವ್ರ ಜ್ವರದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ೧೧ ಗಂಟೆವರೆಗೂ ಅವರು ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆರೋಗ್ಯದಲ್ಲಿ ಏರು ಪೇರಾದಾಗ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.