10:52 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ ಅಮೃತ ಮಹೋತ್ಸವ; ಆ. 10ರಂದು  ನೆಹರೂ ಪ್ರತಿಮೆಯಿಂದ ಗಾಂಧಿ ಪುತ್ಥಳಿ ವರೆಗೆ ಪಕ್ಷಾತೀತ ಪಾದಯಾತ್ರೆ: ಮಾಜಿ ಶಾಸಕ ಲೋಬೊ

06/08/2022, 20:54

ಮಂಗಳೂರು(reporterkarnataka.com): ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಗರದಲ್ಲಿ ಆ. 10ರಂದು ಕಾಂಗ್ರೆಸ್ ನೇತೃತ್ವದಲ್ಲಿ ಪಕ್ಷಾತೀತವಾಗಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಮುಖಂಡ ಜೆ.ಆರ್.ಲೋಬೊ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಪಾಂಡೇಶ್ವರದಲ್ಲಿರುವ ಜವಹರಲಾಲ್ ನೆಹರೂ ಅವರ ಪ್ರತಿಮೆಗೆ ಬೆಳಿಗ್ಗೆ 9.30ಕ್ಕೆ ಹೂವಿನ ಹಾರ ಹಾಕುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಗುತ್ತದೆ ಎಂದರು.

ಪಾದಯಾತ್ರೆಯು ಎ.ಬಿ.ಶೆಟ್ಟಿ ವೃತ್ತ, ಗಡಿಯಾರ ಗೋಪುರ, ಕೊಡಿಯಾಲ್ ಬೈಲ್, ಪಿ.ವಿ.ಎಸ್ ವೃತ್ತ, ಬೆಸೆಂಟ್ ಕಾಲೇಜು ಮಾರ್ಗವಾಗಿ ಲಾಲ್‌ಬಾಗ್ ವೃತ್ತದವರೆಗೆ ಸಾಗಲಿದೆ. ಲಾಲ್‌ಬಾಗ್‌ನ ಗಾಂಧಿ ಪುತ್ಥಳಿಗೆ ಹಾರ ಹಾಕುವ ಮೂಲಕ ಪಾದಯಾತ್ರೆ ಸಂಪನ್ನಗೊಳ್ಳಲಿದೆ.

ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಲಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಶಾಹುಲ್ ಹಮೀದ್, ಪ್ರಕಾಶ್ ಸಾಲ್ಯಾನ್, ಟಿ.ಕೆ.ಸುಧೀರ್, ಅಬ್ದುಲ್ ಸಲೀಂ, ಸುನಿಲ್ ಪೂಜಾರಿ, ರಾಕೇಶ್ ದೇವಾಡಿಗ, ಹೈದರಾಲಿ, ರಿತೇಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು