ಇತ್ತೀಚಿನ ಸುದ್ದಿ
ಸ್ವಾತಂತ್ರ್ಯಅಮೃತ ಮಹೋತ್ಸವ: 9 ಕೇಂದ್ರ ಕಾರಾಗೃಹದಿಂದ 81 ಕೈದಿಗಳ ಬಿಡುಗಡೆ
16/08/2022, 18:19
ಬೆಂಗಳೂರು(reporterkarnataka.com): ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಹಿನ್ನೆಲೆ ರಾಜ್ಯದ 9 ಕೇಂದ್ರ ಕಾರಾಗೃಹಗಳಲ್ಲಿ ಅಲ್ಪಾವಧಿ ಶಿಕ್ಷಾ ಬಂಧಿಗಳಿಗಾಗಿರುವ ಮೂವರು ಮಹಿಳೆಯರು ಸೇರಿ 81 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ.
ಸೋಮವಾರ ಜೈಲುಗಳಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಬಳಿಕ ಕೈದಿಗಳಿಗೆ ಬಿಡುಗಡೆ ಪ್ರಮಾಣ ಪತ್ರ ನೀಡಿ ಕಳುಹಿಸಲಾಗುತ್ತದೆ ಎಂದು ಕಾರಾಗೃಹ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು 14, ಬೆಳಗಾವಿ 3, ಬಳ್ಳಾರಿ 8, ವಿಜಯಪುರ ಇಬ್ಬರು ಮಹಿಳೆಯರು ಸೇರಿ 10, ಧಾರವಾಡ 6, ಕಲಬುರಗಿ 10, ಮೈಸೂರು 20, ಶಿವಮೊಗ್ಗ 9, ಶಿವಮೊಗ್ಗ ಮಹಿಳಾ ಕಾರಾಗೃಹ ಒಬ್ಬ ಮಹಿಳೆ ಒಟ್ಟು 81 ಮಂದಿಯನ್ನು ಬಿಡುಗಡೆ ಮಾಡಲಾಗುತ್ತದೆ.
75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತಮಹೋತ್ಸವ ಅಂಗವಾಗಿ ರಾಜ್ಯಪಾಲರ ಸೂಚನೆ ಮೇರೆಗೆ ವಿಶೇಷ ಆದ್ಯತೆ ಮೇರೆಗೆ ಅಲ್ಫಾವಧಿ (8-10 ವರ್ಷ) ಶಿಕ್ಷೆಗೊಳಗಾಗಿರುವ ಕೈದಿಗಳಲ್ಲಿ ಸನ್ನಡೆ ಹೊಂದಿರುವ ಕೈದಿಗಳನ್ನು ಆಯ್ದು ಬಿಡುಗಡೆ ಮಾಡಲಾಗುತ್ತಿದೆ ಎಂದು ಕಾರಾಗೃಹ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.