10:24 AM Monday25 - November 2024
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ

14/08/2024, 21:36

ಮಂಗಳೂರು(reporterkarnataka.com): ದೇಶದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ,ಸಂವಿಧಾನದ ಸಂರಕ್ಷಣೆಗಾಗಿ, ಕಾರ್ಮಿಕ ವರ್ಗದ ಹಕ್ಕುಗಳ ಉಳಿವಿಗಾಗಿ ಹಾಗೂ ಕಾರ್ಪೊರೇಟ್ ಪರ ನೀತಿಗಳನ್ನು ಹಿಮ್ಮೆಟ್ಟಿಸಲು ದೇಶ ಉಳಿಸಿ, ಜನತೆಯ ಬದುಕನ್ನು ರಕ್ಷಿಸಿ ಎಂಬ ಘೋಷಣೆ ಯೊಂದಿಗೆ ಕಾರ್ಮಿಕ ವರ್ಗದ ನೇತ್ರತ್ವದಲ್ಲಿ ಅಖಿಲ ಭಾರತ ಕರೆಯ ಮೇರೆಗೆ ನಗರದಲ್ಲಿಂದು ಅಹೋರಾತ್ರಿ ಸಾಮೂಹಿಕ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡಿದ ಸಿಐಟಿಯು ದ.ಕ.ಜಿಲ್ಲಾಧ್ಯಕ್ಷರಾದ ಜೆ.ಬಾಲಕ್ರಷ್ಣ ಶೆಟ್ಟಿಯವರು, ದೇಶಕ್ಕೆ ಸ್ವಾತಂತ್ರ್ಯ ದೊರೆತು 77 ವರ್ಷಗಳು ಕಳೆದರೂ ಕೂಡ ದೇಶದ ಕಾರ್ಮಿಕ ವರ್ಗ ಹಾಗೂ ಜನಸಾಮಾನ್ಯರ ಬದುಕು ತೀವ್ರ ಸಂಕಷ್ಟದ ದಲ್ಲಿದೆ. ದೇಶದ ಆಳುವ ವರ್ಗ ಪ್ರಜ್ಞಾಪೂರ್ವಕವಾಗಿ ಕಾರ್ಪೊರೇಟ್ ಪರ ನೀತಿಗಳನ್ನು ಜಾರಿಗೊಳಿಸುವ ಮೂಲಕ ಉಳ್ಳವರ ಹಿತ ಕಾಪಾಡಲು ತುದಿಗಾಲಲ್ಲಿ ನಿಂತಿದೆ ಎಂದು ಹೇಳಿದರು.
ಸಿಐಟಿಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಮಾತನಾಡುತ್ತಾ, ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಕಾರ್ಮಿಕ ವರ್ಗದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸಮರಧೀರ ಹೋರಾಟದ ಪರಂಪರೆಯನ್ನು ಹೊಂದಿದೆ. ಅಂದು ಬ್ರಿಟೀಷ್ ಸಾಮ್ರಾಜ್ಯಶಾಹಿಗಳ ವಿರುದ್ದ ಪ್ರಬಲ‌ ಪ್ರತಿರೋಧವೊಡ್ಡಿದ್ದ ದೇಶದ ಕಾರ್ಮಿಕ ವರ್ಗ ಇಂದು ಅಮೇರಿಕನ್ ಸಾಮ್ರಾಜ್ಯಶಾಹಿಗಳ ವಿರುದ್ದ ಸಮರಶೀಲ ಹೋರಾಟ ನಡೆಸುವ ಅನಿವಾರ್ಯತೆ ಸ್ರಷ್ಠಿಯಾಗಿದೆ ಎಂದು ಹೇಳಿದರು.
ಸತ್ಯಾಗ್ರಹವನ್ನುದ್ದೇಶಿಸಿ ರೈತ ಸಂಘಟನೆಯ ಮುಖಂಡರಾದ ಕೆ.ಯಾದವ ಶೆಟ್ಟಿ, ಕಾರ್ಮಿಕ ನಾಯಕರಾದ ಬಿ ಎಂ.ಭಟ್, ಸುಕುಮಾರ್ ತೊಕ್ಕೋಟು, ಯುವಜನ ನಾಯಕರಾದ ಮುನೀರ್ ಕಾಟಿಪಳ್ಳ, ಮಹಿಳಾ ಮುಖಂಡರಾದ ಜಯಂತಿ ಶೆಟ್ಟಿ ಬ್ಯಾಂಕ್ ನೌಕರರ ಮುಖಂಡರಾದ ಬಿ. ಎಂ.ಮಾಧವ ಮುಂತಾದವರು ಮಾತನಾಡಿದರು.


ಪ್ರತಿಭಟನೆಯಲ್ಲಿ ಸಿಐಟಿಯು ನಾಯಕರಾದ ಯೋಗೀಶ್ ಜಪ್ಪಿನಮೊಗರು, ಪದ್ಮಾವತಿ ಶೆಟ್ಟಿ, ಸುಂದರ ಕುಂಪಲ, ರೋಹಿದಾಸ್,ರವಿಚಂದ್ರ ಕೊಂಚಾಡಿ, ವಸಂತಿ ,ಈಶ್ವರಿ, ರೈತ ನಾಯಕರಾದ ಸದಾಶಿವದಾಸ್, ಕ್ರಷ್ಣಪ್ಪ ಸಾಲ್ಯಾನ್,ಯುವಜನ ನಾಯಕರಾದ ಸಂತೋಷ್ ಬಜಾಲ್,ನವೀನ್ ಕೊಂಚಾಡಿ,ರಿಜ್ವಾನ್ ಹರೇಕಳ, ವಿದ್ಯಾರ್ಥಿ ನಾಯಕರಾದ ವಿನುಷ ರಮಣ ಸಾಮಾಜಿಕ ಚಿಂತಕರಾದ ಪ್ಲೇವಿಕ್ರಾಸ್ತಾ ಅತ್ತಾವರ,ಮೀನಾ ಟೆಲ್ಲಿಸ್,ಬಿ ಎನ್ ದೇವಾಡಿಗ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು