8:25 PM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ ಕಣಕ್ಕೆ

04/04/2026, 22:29

ಮೆಟ್ಟೂರು(reporterkarnataka.com): ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಪಕ್ಕದಲ್ಲಿನ ಮೆಟ್ಟೂರಿನಿಂದ ನರಹಂತಕ ವೀರಪ್ಪನ್‌ ಪುತ್ರಿ ವಿದ್ಯಾರಾಣಿ ಕಣಕ್ಕಿಳಿದಿದ್ದಾರೆ. ಸಾಲ ಇದೆ ಎಂದು ತಿಳಿಸಿದ್ದಾರೆ.

ಸ್ಥಿರಾಸ್ತಿಗಳು ಇಲ್ಲ ಎಂದು ನಾಮಪತ್ರದಲ್ಲಿ ಘೋಷಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಮೆಟ್ಟೂರಿನ ಹಿನ್ನೀರಿನ ಮೂಲೆಕಾಡಿನಲ್ಲಿರುವ ವೀರಪ್ಪನ್ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿ ಅಖಾಡಕ್ಕೆ ಧುಮುಕಿದ್ದಾರೆ‌. ವೀರಪ್ಪನ್ ಪತ್ನಿ ಮುತ್ತುಲಕ್ಷ್ಮಿ ಕೂಡ ಈ ಹಿಂದೆ ಚುನಾವಣೆಯಲ್ಲಿ ಆಸಕ್ತಿ ತೋರಿದ್ದರಾದರೂ ಈ ಬಾರಿ ಎಲ್ಲಿಯೂ ಕಾಣಿಸಿಕೊಂಡಿಲ್ಲ.

*ಡಿಕೆಶಿಯನ್ನು ಭೇಟಿಯಾಗಿದ್ದ ವಿದ್ಯಾರಾಣಿ*
ಮೆಟ್ಟೂರಿನ ಹಿನ್ನೀರಿನ ಮೂಲೆಕಾಡು ಎಂಬಲ್ಲಿರುವ ವೀರಪ್ಪನ್ ಸಮಾಧಿಗೆ ಪುತ್ರಿ ವಿದ್ಯಾ ಪೂಜೆ ಸಲ್ಲಿಸಿ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ‌. ಇತ್ತೀಚೆಗಷ್ಟೇ ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದರು.
2020ರಲ್ಲಿ ತಮಿಳುನಾಡು ರಾಜಕಾರಣಕ್ಕೆ ಪ್ರವೇಶಿಸಿದ ವಿದ್ಯಾರಾಣಿ ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದರು. ಆನಂತರ ಬಿಜೆಪಿ ತೊರೆದ ಅವರು, ನಾಮ್ ತಮಿಲರ್ ಕಚ್ಚಿ (ಎನ್‌ಟಿಕೆ) ಪಕ್ಷ ಸೇರ್ಪಡೆಯಾಗಿದ್ದಾರೆ.

*ಚುನಾವಣೆ ದಿನಾಂಕಗಳು*
ಕೇರಳ, ಅಸ್ಸಾಂ, ಪುದುಚೇರಿಯಲ್ಲಿ ಏ.9ಕ್ಕೆ, ತಮಿಳುನಾಡಲ್ಲಿ ಏಪ್ರಿಲ್ 23ಕ್ಕೆ ಮತ್ತು ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು 29ರಂದು ಮತದಾನ ನಡೆಯಲಿದೆ. 5 ರಾಜ್ಯಗಳ ಒಟ್ಟು 824 ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತಿದ್ದು 17.4 ಕೋಟಿ ಜನರು ಮತದಾನದ ಅರ್ಹತೆ ಪಡೆದಿದ್ದಾರೆ . ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯಲಿದೆ. ಎರಡೂ ಕ್ಷೇತ್ರಗಳಲ್ಲಿ ಏಪ್ರಿಲ್ 9ರಂದು ಮತದಾನ ನಡೆದ್ರೆ ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು