5:32 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ತಾಯಿ-ಮಗುವಿನ ಆರೋಗ್ಯ ರಕ್ಷಣೆಗೆ ಮೊಬೈಲ್ ಕರೆ ಸಂದೇಶ: ದೇಶಾದ್ಯಂತ ಎಲ್ಲ ಭಾಷೆಗಳಲ್ಲಿ ವಿನೂತನ ಕಾರ್ಯಕ್ರಮ ‘ಕಿಲ್ಕಾರಿ’

12/11/2024, 20:48

ಮಂಗಳೂರು(reporterkarnataka.com): ಕೇಂದ್ರ ಸರ್ಕಾರವು 4 ತಿಂಗಳು ಮೇಲ್ಪಟ್ಟ ಗರ್ಭಿಣಿ ಮಹಿಳೆಯ ಹಾಗೂ ಒಂದು ವರ್ಷದೊಳಗಿನ ಮಕ್ಕಳಿಗೆ ಕುಟುಂಬದ ಸದಸ್ಯರು ವಹಿಸಬೇಕಾದ ಕಾಳಜಿ, ಲಸಿಕೆ ಒದಗಿಸುವಿಕೆ ಹಾಗೂ ಇತರೆ ತಪಾಸಣೆ ಕೈಗೊಳ್ಳಲು ಸಹಾಯಕವಾಗುವ ದಿಶೆಯಲ್ಲಿ ದೇಶಾದ್ಯಂತ ಎಲ್ಲಾ ಭಾಷೆಗಳಲ್ಲಿ ವಿನೂತನ ಕಾರ್ಯಕ್ರಮ “ಕಿಲ್ಕಾರಿ” ಮೊಬೈಲ್ ಕರೆ ಆರಂಭಿಸಲಾಗಿದೆ ಎಂದು ರಾಜ್ಯ ಕಿಲ್ಕಾರಿ ಸಂಯೋಜಕಿ ಡಾ. ಅಶ್ವಿನಿ ತಿಳಿಸಿದ್ದಾರೆ.
ಕಿಲ್ಕಾರಿಯು ಗರ್ಭಿಣಿಯರು, ತಾಯಂದಿರು ಮತ್ತು ಅವರ ಕುಟುಂಬಗಳಿಗೆ ಸಂತಾನೋತ್ಪತ್ತಿ, ನವಜಾತ ಶಿಶುಗಳು ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಸಕಾಲಿಕ, ನಿಖರವಾದ ಮತ್ತು ಸಂಬಂಧಿತ ಮಾಹಿತಿಯನ್ನು ಒದಗಿಸುವ ಮೊಬೈಲ್ ಆರೋಗ್ಯ ಶಿಕ್ಷಣ ಸೇವೆಯಾಗಿದೆ.
ಈ ಕಾರ್ಯಕ್ರಮವನ್ನು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸಹಭಾಗಿತ್ವದಲ್ಲಿ ಕಾರ್ಯಗತಗೊಳಿಸಲಾಗಿದೆ, ಕುಟುಂಬಗಳ ಆರೋಗ್ಯ ಜ್ಞಾನವನ್ನು ಸುಧಾರಿಸಲು ಮತ್ತು ಜೀವ ಉಳಿಸುವ, ಆರೋಗ್ಯಕರ ಅಭ್ಯಾಸಗಳನ್ನು ತಿಳಿಸುವ ಗುರಿಯನ್ನು ಹೊಂದಿದೆ.
ತಾಯಿ ಮಕ್ಕಳ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಖಅಊ Poಡಿಣಚಿಟನಲ್ಲಿ ದಾಖಲಾಗಿರುವ ಗರ್ಭಿಣಿಯರಿಗೆ ಕುಟುಂಬಗಳ ಮೊಬೈಲ್ ಫೋನ್‍ಗಳಿಗೆ ನೇರವಾಗಿ ಸಮಯ-ಸೂಕ್ಷ್ಮ ಆಡಿಯೊ ಮಾಹಿತಿಯನ್ನು ತಲುಪಿಸಲು ಕಿಲ್ಕಾರಿ ಪ್ರಸ್ತುತ ಇಂಟರಾಕ್ಟಿವ್ ವಾಯ್ಸ್ ರೆಸ್ಪಾನ್ಸ್ ತಂತ್ರಜ್ಞಾನವನ್ನು ಬಳಸಲಾಗಿದೆ. ಗರ್ಭಧಾರಣೆಯಾದ ಎರಡನೇ ತ್ರೈಮಾಸಿಕದಿಂದ ಮಗುವಿಗೆ ಒಂದು ವರ್ಷದವರೆಗೆ (72 ವಾರಗಳು) ತಾಯಿ ಮತ್ತು ಮಗುವಿನ ಸಾವುಗಳು ಸಂಭವಿಸುವುದನ್ನು ತಪ್ಪಿಸಲು ನಿರ್ಣಾಯಕ ಅವಧಿಯನ್ನು ಕರೆಗಳು ಒಳಗೊಳ್ಳುತ್ತವೆ.


ಕಿಲ್ಕಾರಿ ಕಾರ್ಯಕ್ರಮದಡಿ ಆರ್.ಸಿ.ಹೆಚ್ ಪೋರ್ಟಲ್‍ನಲ್ಲಿ ನೋಂದಾಯಿಸಿದ ಗರ್ಭಿಣಿ ಅಥವಾ ಕುಟುಂಬದ ಸದಸ್ಯರ ಮೊಬೈಲ್ ಸಂಖ್ಯೆಗೆ ಪ್ರತಿವಾರ ಕರೆ ಮಾಡುವ ಮೂಲಕ ಕಾಳಜಿ ವಹಿಸಲಾಗುವುದು. ಮೊಬೈಲ್ ಸಂಖ್ಯೆ 0124-4451600 ರ ಮೂಲಕ ಸಂಪರ್ಕಿಸಿ ಪಾಲಕರೊಂದಿಗೆ ಮಾತನಾಡಲಾಗುವುದು. ಕುಟುಂಬದ ಸದಸ್ಯರು ತಾಯಿ ಮಗುವಿನ ಸುಸ್ಥಿರ ಆರೋಗ್ಯಕ್ಕಾಗಿ ಸಹಕರಿಸಬೇಕು. ಒಂದು ವೇಳೆ ಕರೆ ಸ್ವೀಕರಿಸಲು ಅಸಾಧ್ಯವಾದಲ್ಲಿ ಪುನಃ ಆರೋಗ್ಯ ಮಾಹಿತಿ ಪಡೆಯಲು Iಟಿbox ಟಿumbeಡಿ 14423 ಗೆ ಕರೆ ಮಾಡಬಹುದು.
ಗರ್ಭಿಣಿ ಎಂದು ತಿಳಿದ ದಿನದಿಂದಲೇ ಆರೋಗ್ಯ ಇಲಾಖೆ ಮೂಲಕ ತಾಯಿ ಕಾರ್ಡ್ ವಿತರಣೆ, ಟಿಡಿ ಚುಚ್ಚುಮದ್ದು ನೀಡುವಿಕೆ, ರಕ್ತ ಹೀನತ ತಡೆಗೆ ಕನಿಷ್ಠ 180 ಕಬ್ಬಿಣಾಂಶ ಮಾತ್ರೆಗಳ ವಿತರಣೆ, ಪ್ರತಿ ತಿಂಗಳು ವೈದ್ಯರಿಂದ ತಪಾಸಣೆ ರಕ್ತಪರೀಕ್ಷೆ ಹುಟ್ಟಿನಿಂದ ಒಂದು ವರ್ಷದೊಳಗಿನ ಮಕ್ಕಳಿಗೆ ನೀಡಬೇಕಾದ ಲಸಿಕೆ ಕುರಿತು ಪಾಲಕರಿಗೆ ಮನನ ಮಾಡುವ ಮಹತ್ವಪೂರ್ಣ ಕಾರ್ಯಕ್ರಮ ಇದಾಗಿದೆ.
ಜಿಲ್ಲೆಯಲ್ಲಿ ಪ್ರತಿ ತಿಂಗಳ 9 ಮತು 24 ತಾರೀಖಿನಂದು ಎಲ್ಲಾ ಗರ್ಭಿಣಿಯರ ತಪಾಸಣೆಯನ್ನು ಮಾಡಲಾಗುತ್ತಿದ್ದು, ಎಲ್ಲಾ ಮಾಹಿತಿಯನ್ನು ಪೋನ್ ಮೂಲಕ ಪಾಲಕರಿಗೆ ಮಾಹಿತಿ ವಿನಿಮಯ ಮಾಡುವ ಮೂಲಕ ಮಗುವಿನ ಆರೋಗ್ಯದ ಕಾಳಜಿ ವಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಹೆಚ್.ಆರ್ ತಿಮ್ಮಯ್ಯ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು