10:40 PM Tuesday18 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ತಾಳಿ ಕಟ್ಟುವ ವೇಳೆ ಮದುಮಗಳ ಹೈಡ್ರಾಮಾ: ಪ್ರಿಯರನ ಮದುವೆಯಾಗುವುದಾಗಿ ಹಠ; ಕಕ್ಕಾಬಿಕ್ಕಿಯಾದ ವರ

22/05/2022, 23:20

ಮೈಸೂರು(reporterkarnataka.com): ಇನ್ನೇನು ತಾಳಿ ಕಟ್ಟುವ ಸಮಯ ಬಂತು ಎನ್ನುವಷ್ಟರಲ್ಲಿ ಮದುವೆ ಹೆಣ್ಣು ಹೈಡ್ರಾಕ್ಸೈಡ್ ಮಾಡಿ, ತಾನು ಪ್ರೀತಿಸಿದವನ ಮದುವೆಯಾಗುವುದಾಗಿ ಹಠ ಹಿಡಿದ ಹಿನ್ನೆಲೆಯಲ್ಲಿ ಮದುವೆಯೊಂದು ನಿಂತು ಹೋದ ಘಟನೆ ನಡೆದಿದೆ.

ಮದುವೆಯಲ್ಲಿ ತಾಳಿ ಕಟ್ಟುವ ವೇಳೆ ಮದುಮಗಳು ವರನಿಗೆ ಶಾಕ್ ಕೊಟ್ಟಿದ್ದಾಳೆ.ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಾಳೆ.

ಮದುಮಗಳು ಸಿಂಚನ ತನ್ನ ಪಕ್ಕದ ಮನೆಯ ಯುವಕನನ್ನು ಪ್ರೀತಿಸಿದ್ದು, ಆದರೆ ಮನೆಯವರು ಎಚ್.ಡಿ.ಕೋಟೆ ಯುವಕನೊಂದಿಗೆ ಮದುವೆ ಮಾಡಲು ನಿರ್ಧರಿಸಿದ್ದರು. ಆದರೆ ತಾಳಿ ಕಟ್ಟುವ ಹೊತ್ತಲ್ಲೇ ಕುಸಿದುಬಿದ್ದಂತೆ ನಾಟಕವಾಡಿ ಬಳಿಕ ಮದುವೆಯನ್ನೇ ಮುರಿದಿದ್ದಾಳೆ. ವರನ ಕಡೆಯವರೆ ಮದುವೆಗಾಗಿ ಲಕ್ಷಾಂತರ ರೂ. ಖರ್ಚು‌ಮಾಡಿದ್ದು, ಕೊನೇ ಕ್ಷಣದಲ್ಲಿ ಮದುಮಗಳ ನಿರ್ಧಾರ ಕೇಳಿ‌ ವರನ ಕಡೆಯವರು ಕಕ್ಕಾಬಿಕ್ಕಿಯಾಗಿದ್ದಾರೆ. ವಧುವಿಗೆ ಛೀಮಾರಿ ಹಾಕಿದ್ದಲ್ಲದೆ, ಖರ್ಚು ಮಾಡಿರುವ ಹಣವನ್ನು ಹಿಂತಿರುಗಿಸುವಂತೆ ಒತ್ತಾಯಿಸಿದ್ದಾರೆ. ಸದ್ಯ ಮದುಮಗಳನ್ನು ಕೆ.ಆರ್.ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು