6:58 PM Thursday20 - November 2025
ಬ್ರೇಕಿಂಗ್ ನ್ಯೂಸ್
ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:…

ಇತ್ತೀಚಿನ ಸುದ್ದಿ

ರೈತರಿಗೆ ತಕ್ಷಣ ಬೆಳೆ ನಷ್ಟ ಪರಿಹಾರ ನೀಡಲು ಕ್ರಮ ವಹಿಸಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

20/11/2025, 18:50

ಬೆಂಗಳೂರು(reporterkarnataka.com): ಕಳೆದ ಎರಡು ವರ್ಷದಿಂದ ವಿಪರೀತ ಮಳೆಯಿಂದ ಹಲವಾರು ಬೆಳೆ ನಾಶವಾಗಿದ್ದು, ಬೆಳೆ ನಷ್ಟ ಸರ್ವೆಯಲ್ಲಿ ಲೋಪವಾಗಿದ್ದು, ಕೂಡಲೇ ರಾಜ್ಯಾದ್ಯಂತ ಇದನ್ನು ಸರಿಪಡಿಸಿ ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು. ಮತ್ತು ಇದಕ್ಕೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಕಳೆದ ಎರಡು ವರ್ಷ ವಿಪರೀತ ಮಳೆ ಬಿದ್ದು ರಾಜ್ಯದ ಬಹುತೇಕ ಬೆಳೆಗಳು ನಾಶವಾಗಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ರೈತರಿಗೆ ಎರಡು ವರ್ಷವೂ ಕೂಡ ನಷ್ಟವಾಗಿದ್ದು ಮೆಕ್ಕೆಜೋಳ, ಸೊಯಾಬಿನ್, ಹೆಸರು, ಈರುಳ್ಳಿ ಬೆಳೆ ನಾಶವಾಗಿದೆ. ಕಳೆದ ವರ್ಷ ಮಳೆಯಿಂದ ನಷ್ಟವಾದ ಬೆಳೆಗೆ ಯಾವುದೇ ಪರಿಹಾರ ಸಿಕ್ಕಿರುವುದಿಲ್ಲ. ಮೊನ್ನೆ ತಾವು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿಯನ್ನು ಸಲ್ಲಿಸಿರುವುದನ್ನು ನಾವೆಲ್ಲರೂ ಗಮನಿಸಿದ್ದೇವೆ. ಆದರೆ, ವಾಸ್ತವಾಂಶ ತಮ್ಮ ಗಮನಕ್ಕೆ ತರಲು ಬಯಸುತ್ತೇನೆ.
ಬೆಳೆ ನಷ್ಟ ಪರಿಹಾರ ಸರ್ವೆ ಕಾರ್ಯ ಸಮರ್ಪಕವಾಗಿ ನ್ಯಾಯ ಸಮ್ಮತವಾಗಿ ನಡೆದಿರುವುದಿಲ್ಲ. ಕೃಷಿ, ಕಂದಾಯ ಮತ್ತು ಸಾಂಖಿಕ ಇಲಾಖೆ ಅಧಿಕಾರಿಗಳು ವ್ಯಾಪಕವಾಗಿ ರೈತರ ಜಮೀನಿನಲ್ಲಿ ಪರೀಕ್ಷೆ ಮಾಡದೇ ಸರ್ಕಾರಕ್ಕೆ ವರದಿ ಸಲ್ಲಿಸಿರುತ್ತಾರೆ. ಇದರ ಪರಿಣಾಮವಾಗಿ ಹಲವಾರು ತಾಲೂಕುಗಳಲ್ಲಿ ಒಟ್ಟು ಬಿತ್ತನೆಯಾದ ಪ್ರದೇಶದ ಶೇ 10 % ರಷ್ಟು ಬೆಳೆ ನಾಶ ಆಗಿಲ್ಲ ಎನ್ನುವ ವರದಿ ಬಂದಿದೆ. ಇದು ಸತ್ಯಕ್ಕೆ ದೂರವಾಗಿರುವಂಥದ್ದು ಕೆಲವು ತಾಲೂಕುಗಳಲ್ಲಿ ನಷ್ಟವೇ ಆಗಿಲ್ಲ ಎನ್ನುವುದು ಸತ್ಯಕ್ಕೆ ದೂರವಾಗಿದೆ. ಉದಾಹರಣೆಗೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಸಾಕಷ್ಟು ಬೆಳೆ ನಷ್ಟವಾಗಿದ್ದರೂ ನಷ್ಟವಾಗಿಲ್ಲ ಎಂದು ವರದಿ ನೀಡಿದ್ದಾರೆ. ರಾಜ್ಯಾದ್ಯಂತ ಇದನ್ನು ಕೂಡಲೇ ಸರಿಪಡಿಸಬೆಕು ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು. ಮತ್ತು ಇದಕ್ಕೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

*ಮೆಕ್ಕೆಜೋಳ ಖರೀದಿಗೆ ನಿರ್ದೇಶನ ನೀಡಿ:*
ರಾಜ್ಯದಲ್ಲಿ ಮೆಕ್ಕೆ ಜೋಳ ಸುಮಾರು 17 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದು ಕಳೆದ ವರ್ಷ 54 ಲಕ್ಷ ಮೆಟ್ರಿಕ್ ಟನ್ ಬಂದಿದ್ದು, ಈ ವರ್ಷವೂ ಅಷ್ಟೇ ಉತ್ಪನ್ನ ಬರುವ ನಿರೀಕ್ಷೆ ಇದೆ. ಈ ವರ್ಷ ಮೆಕ್ಕೆಜೋಳದ ಬೆಲೆ ಸಂಪೂರ್ಣ ಕುಸಿದಿದೆ. ಅದು ಪ್ರತಿ ಕ್ವಿಂಟಾಲ್ ಗೆ 1600 ರೂ. ಗೆ ಇಳಿದಿರುವುದು ರೈತರಿಗೆ ಆಘಾತ ತಂದಿದೆ. ಕೇಂದ್ರ ಸರ್ಕಾರ ಈಗಾಗಲೇ ಎಂಎಸ್ ಪಿ 2400 ರೂ. ಘೋಷಣೆ ಮಾಡಿದೆ. ರೈತರು ಇದರ ಮೇಲೆ ರಾಜ್ಯ ಸರ್ಕಾರ ಕನಿಷ್ಠ 500 ರೂ. ಪ್ರತಿ ಕ್ವಿಂಟಾಲ್ ಗೆ ಕೊಡಬೇಕೆಂದು ಎಲ್ಲ ಜಿಲ್ಲೆಗಳಲ್ಲಿ ಆಗ್ರಹಿಸುತ್ತಿದ್ದಾರೆ. ಈ ಹಿಂದೆ ಕೇಂದ್ರ ಸರ್ಕಾರದ ನಿರ್ದೆಶನಕ್ಕೆ ಕಾಯದೇ ಮೆಕ್ಕೆ ಜೋಳ ಖರೀದಿಸಿ ಅದು ಹಾಳಾಗದೇ ಇರುವ ಬೆಳೆ ಇರುವುದರಿಂದ ಸೂಕ್ತ ಮಾರುಕಟ್ಟೆ ದರ ಹೆಚ್ಚಾದಾಗ ರಾಜ್ಯ ಸರ್ಕಾರ ಮಾರಬಹುದು. ನಂತರ ಕೇಂದ್ರಕ್ಕೆ ವರದಿ ಕಳುಹಿಸಬಹುದು. ಈ ಬಗ್ಗೆ ಕೂಡಲೆ ಒಂದು ನಿರ್ಧಾರ ಮಾಡಿ ಖರೀದಿಗೆ ಸೂಕ್ತ ನಿರ್ದೇಶನ ನೀಡಲು ವಿನಂತಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು