2:40 PM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ತಲಪಾಡಿ ಶಾರದಾ ವಿದ್ಯಾನಿಕೇತನದ ವಿದ್ಯಾರ್ಥಿ ಆತ್ಮಹತ್ಯೆ: ಕ್ರಮ ಕೈಗೊಳ್ಳಲು ಎನ್ ಎಸ್ ಯುಐ ಆಗ್ರಹ

12/06/2022, 23:08

ಮಂಗಳೂರು(reporterkarnataka.com): ತನ್ನ ತಾಯಿಯ ಜನ್ಮದಿನದಂದು ಶುಭ ಹಾರೈಸಲು ವಾರ್ಡನ್ ಮೊಬೈಲ್ ಫೋನ್ ನೀಡಲಿಲ್ಲ ಎಂದು ಆರೋಪಿಸಿ ತಲಪಾಡಿಯ ಶಾರದಾ ವಿದ್ಯಾನಿಕೇತನಾ ಖಾಸಗಿ ವಿದ್ಯಾಸಂಸ್ಥೆಯ 9ನೇ ತರಗತಿಯ ವಿದ್ಯಾರ್ಥಿ  ಬೆಂಗಳೂರು ಮೂಲದ ಪೂರ್ವಜ್ (14) ಎಂಬ ಬಾಲಕನೊಬ್ಬ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾ ಸಂಸ್ಥೆಯ ಬೇಜವಾಬ್ದಾರಿತನಕ್ಕೆ ಎನ್ ಎಸ್ ಯುಐ ದ.ಕ. ಜಿಲ್ಲಾ ಸಮಿತಿ ಖಂಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ಖಾಸಗಿ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದೆ, ಈ ಬಗ್ಗೆ ಜಿಲ್ಲಾಡಳಿತ ಹಾಗೂ ಸರ್ಕಾರದ ಯಾವುದೇ ರೀತಿಯ ಸೂಕ್ತ ಕ್ರಮಗೊಳ್ಳದಿರುವುದು ಖಂಡನೀಯ ಎಂದು ಎನ್ ಎಸ್ ಯುಐ ಹೇಳಿದೆ.

ಹಾಸ್ಟೆಲ್ ನಲ್ಲಿ ನಿಯಮಾವಳಿ ಪ್ರಕಾರ ವಾರ್ಡನ್ ಮೊಬೈಲ್ ನೀಡಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದ ಬಾಲಕ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡಿದ್ದಾನೆ.

ತುರ್ತು ಅವಶ್ಯಕತೆಯಿರುವ ಸಂದರ್ಭದಲ್ಲಿ ವಾರ್ಡನ್ ವಿದ್ಯಾರ್ಥಿಗೆ ಪೋಷಕರೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡಬೇಕಿತ್ತು, ಇದರಿಂದ ಅಪ್ರಾಪ್ತ ವಯಸ್ಸಿನ ಬಾಲಕ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಇದಕ್ಕೆ ವಿದ್ಯಾಸಂಸ್ಥೆಯೇ ನೇರ ಹೊಣೆಯಾಗಿದ್ದು, ಆದ್ದರಿಂದ ಜಿಲ್ಲಾಡಳಿತ ಹಾಗೂ ಸರ್ಕಾರವು ಖಾಸಗಿ ವಿದ್ಯಾಸಂಸ್ಥೆಗಳ ಕಟ್ಟುನಿಟ್ಟಾದ ನಿಯಮಗಳಿಗೆ ಬ್ರೇಕ್ ಹಾಕಬೇಕಾಗಿದೆ.

ಎನ್ ಎಸ್ ಯುಐ ಅಧ್ಯಕ್ಷ

ವಿದ್ಯಾರ್ಥಿಯ ಆತ್ಮಹತ್ಯೆಗೆ ಕಾರಣರಾದವ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷ ಸವಾದ್ ಸುಳ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು