7:52 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ತಲಪಾಡಿ ಚೆಕ್ ಪೋಸ್ಟ್: ಕೇರಳದಿಂದ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ರಹಿತ 7.95 ಲಕ್ಷ ರೂ. ವಶಕ್ಕೆ

01/04/2023, 23:50

ಉಳ್ಳಾಲ(reporterkarnataka.com):
ಯಾವುದೇ ದಾಖಲೆಗಳಿಲ್ಲದೆ ಕೇರಳದಿಂದ ಹಣ ಸಾಗಿಸುತ್ತಿದ್ದ ಕಾರನ್ನು ತಲಪಾಡಿ ಚೆಕ್ ಪೋಸ್ಟ್ ಬಳಿ ತಡೆದು ನಿಲ್ಲಿಸಿದ ಪೊಲೀಸರು 7.95 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
ಕಾರನ್ನು ತಡೆಹಿಡಿದ ಉಳ್ಳಾಲ ಪೊಲೀಸರು ಕಾರಿನಲ್ಲಿದ್ದ 7,095,000 ರೂ. ನಗದು ಸಹಿತ ಕಾರನ್ನು ವಶಪಡಿಸಿಕೊಂಡಿದ್ದಾರೆ.ಕಾಸರಗೋಡು ಕುಟ್ರಿಕ್ಕೋಡು ನಿವಾಸಿ ಸುರೇಶ್ ಎಂಬವರಲ್ಲಿದ್ದ ದಾಖಲೆ ರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಉಳ್ಳಾಲ ಪೊಲೀಸರು ಕೇರಳ ಗಡಿಭಾಗ ತಲಪಾಡಿಯಲ್ಲಿ ವಾಹನ ತಪಾಸಣೆಗೈಯ್ಯುತ್ತಿದ್ದಾಗ ನಗದು ಪತ್ತೆಯಾಗಿದೆ. ಚುನಾವಣಾ ಆಯೋಗದ ರಿಟೈನಿಂಗ್ ಅಧಿಕಾರಿಗಳಿಗೆ ನಗದು ಹಾಗೂ ಕಾರನ್ನು ವಿಚಾರಣೆಗೆ ನೀಡಲಾಗಿದೆ.
ಇನ್ನು ಸುರೇಶ್ ಅವರು ಫ್ಯಾಬ್ರಿಕೇಷನ್ ವೃತ್ತಿ ನಡೆಸುವವರಾಗಿದ್ದು, ಮಂಗಳೂರಿನ ಬಂದರಿನಿಂದ ಸಾಮಗ್ರಿಗಳ ಖರೀದಿಗಾಗಿ ಹಣ ತರುತ್ತಿದ್ದರು ಎಂದು ಪ್ರಾಥಮಿಕ ವಿಚಾರಣೆ ವೇಳೆ ತಿಳಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಹಣವಾದಲ್ಲಿ ಪ್ರಕರಣ ದಾಖಲಿಸುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು