11:41 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ತಲಪಾಡಿ ಗಡಿಯಲ್ಲಿ ಇನ್ನಷ್ಟು ಕಟ್ಟುನಿಟ್ಟು: ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇದ್ದರೆ ಮಾತ್ರ  ಇಂದಿನಿಂದ ಮಂಗಳೂರಿಗೆ ಪ್ರವೇಶ

03/08/2021, 08:31

ಮಂಗಳೂರು(reporterkarnataka.com): ನೆರೆಯ ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ತಲಪಾಡಿ ಗಡಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಮತ್ತು ಕೇರಳ ಕಡೆಯಿಂದ ಬರುವ ಬಸ್ ಗಳು ಗಡಿಯಿಂದ 100 ಮೀಟರ್ ದೂರದಲ್ಲಿ ತಂಗಲಿದ್ದು, ಅಲ್ಲಿ 100 ಮೀಟರ್ ಕಾಲ್ನಡಿಗೆಯಲ್ಲಿ ತೆರಳಿಬೇಕಾಗಿದೆ.

ಮಂಗಳೂರು ಪ್ರವೇಶಿಸುವ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯವಾಗಿದೆ.

ಬಸ್ ಪ್ರಯಾಣಿಕರು ಮಾತ್ರವಲ್ಲದೇ ಇತರ ಯಾವುದೇ ವಾಹನದಲ್ಲಿ ತೆರಳುವವರು ಕಡ್ಡಾಯವಾಗಿ ಆರ್ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು. ಕೊರೊನಾ  ಲಸಿಕೆಯ ಎರಡೂ ಡೋಸ್‌ ಪಡೆದಿದ್ದರೂ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದೆ.

ತಲಪಾಡಿ ಗಡಿಯಲ್ಲಿ ಇದುವರೆಗೆ ದಕ್ಷಿಣ ಕನ್ನಡ ಆರೋಗ್ಯ ಇಲಾಖೆಯ ವತಿಯಿಂದ ನಡೆಸಲಾಗುತ್ತಿದ್ದ ಆರ್‌.ಟಿ.ಪಿ.ಸಿ.ಆರ್. ಪರೀಕ್ಷಾ ಕೇಂದ್ರವನ್ನು ಸೋಮವಾರ ತೆರವುಗೊಳಿಸಲಾಗಿದೆ. ಇದೀಗ ರಾಷ್ಟ್ರೀಯ ಹೆದ್ದಾರಿಯ ಮದ್ಯದಲ್ಲಿ ನಿರ್ಮಿಸಲಾಗಿದೆ.

ಇನ್ನು ಮಂಗಳೂರು ಕಡೆಯಿಂದ ತಲಪಾಡಿಗೆ ಬರುವ ಖಾಸಗಿ ಬಸ್‌ಗಳು ಟೋಲ್‌ಗೇಟ್‌ ವರೆಗೆ ಮಾತ್ರ ಬರಲು ಅವಕಾಶವಿದ್ದು, ಅಲ್ಲಿಂದ ಪ್ರಯಾಣಿಕರು ಇಳಿದು  100 ಮೀಟರ್ ದೂರ ಕಾಲ್ನಡಿಗೆಯಲ್ಲಿ ಮೇಲಿನ ಕೇರಳ ತಲಪಾಡಿಯ ಬಸ್ ತಂಗುದಾಣಕ್ಕೆ ನಡಕೊಂಡೆ ಬರಬೇಕಾಗಿದೆ. ಅಲ್ಲಿರುವ ಕಾಸರಗೋಡು ಕಡೆಗೆ ಬರುವ ಬಸ್ಸನ್ನು ಏರಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು