2:39 AM Thursday3 - April 2025
ಬ್ರೇಕಿಂಗ್ ನ್ಯೂಸ್
Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ Solar power | ದೇಶದ 2,249 ರೈಲು ನಿಲ್ದಾಣಗಳಲ್ಲಿ 209 ಮೆಗಾವ್ಯಾಟ್‌ ಸೌರ… EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ… Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ

ಇತ್ತೀಚಿನ ಸುದ್ದಿ

ತಲಪಾಡಿ ಗಡಿಯಲ್ಲಿ ಆರ್ ಟಿಪಿಸಿಆರ್ ವರದಿ ಕಡ್ಡಾಯ: ಕೇರಳ ವಿಧಾನಸಭೆಯಲ್ಲಿ ಪ್ರಸ್ತಾಪ; ಸೂಕ್ತ ಕ್ರಮಕ್ಕೆ ಪಿಣರಾಯಿ ಭರವಸೆ

05/08/2021, 18:09

ತಿರುವನಂತಪುರ(reporterkarnataka.com): ಕೋವಿಡ್ ನೆಪವೊಡ್ಡಿ ಕೇರಳ- ಕರ್ನಾಟಕ ಗಡಿ ತಲಪಾಡಿಯಲ್ಲಿ ಕಾಸರಗೋಡು ಕಡೆಯಿಂದ ಮಂಗಳೂರಿಗೆ ಪ್ರಯಾಣಿಸುವವರಿಗೆ 72 ತಾಸುಗಳೊಳಗಿನ ಆರ್ ಟಿಪಿಸಿಆರ್ ವರದಿ ಕಡ್ಡಾಯಗೊಳಿಸಿದ ಬಗ್ಗೆ ಕೇರಳ ವಿಧಾನಸಭೆಯಲ್ಲಿ ಗುರುವಾರ ಪ್ರಸ್ತಾಪಿಸಲಾಯಿತು.

ಮಂಜೇಶ್ವರ ಶಾಸಕ ಆಶ್ರಫ್ ಅವರು ಸಬ್ ಮಿಷನ್ ಮೂಲಕ ವಿಷಯ ಪ್ರಸ್ತಾಪಿಸಿ, ಅನಾದಿ ಕಾಲದಿಂದಲೂ ಮಂಜೇಶ್ವರ, ಕಾಸರಗೋಡು ಪ್ರದೇಶದ ಜನರು ಶಿಕ್ಷಣ, ವೈದ್ಯಕೀಯ ಸೇವೆ, ಉದ್ಯೋಗ ಹಾಗೂ ವ್ಯಾಪಾರಕ್ಕಾಗಿ ನೆರೆಯ ಮಂಗಳೂರು ನಗರವನ್ನು ಆಶ್ರಯಿಸಿದ್ದಾರೆ. ಆದರೆ ಕೋವಿಡ್ ನೆಪವೊಡ್ಡಿ ಕರ್ನಾಟಕದ ನೂತನ ಮುಖ್ಯಮಂತ್ರಿಯವರು 72 ತಾಸುಗಳೊಳಗಿನ ಆರ್ ಟಿಪಿಸಿಆರ್ ರಿಪೋರ್ಟ್ ಇದ್ದವರಿಗೆ ಮಾತ್ರ ತಲಪಾಡಿ ಗಡಿ ಮೂಲಕ ಮಂಗಳೂರು ಪ್ರವೇಶಕ್ಕೆ ಅವಕಾಶ ನೀಡಿದ್ದಾರೆ. ಎರಡು ಡೋಸ್ ವಾಕ್ಸಿನ್ ಪಡೆದವರಿಗೂ ಅವಕಾಶ ನೀಡುತ್ತಿಲ್ಲ. ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಡಯಾಲಿಸಿಸ್ ಮಾಡುವವರಿಗೆ, ಇತರ ಕಾಯಿಲೆ ಉಳ್ಳರಿಗೆ, ಉದ್ಯೋಗ ಹೊಂದಿದವರಿಗೆ ತುಂಬಾ ತೊಂದರೆಯಾಗಿದೆ ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್,  ಇದು ಕೇಂದ್ರ ಸರಕಾರದ ನಿಯಮಗಳ ಉಲ್ಲಂಘನೆಯಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದು ಸೂಕ್ತವಾಗಿ ನಿಭಾಯಿಸುವ ಬಗ್ಗೆ ವಿಧಾನಸಭೆಯಲ್ಲಿ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು