7:00 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ತಲೆನೋವು: ಮಂಚಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ಆಕಸ್ಮಿಕ ಸಾವು

25/10/2022, 18:38

ಬಂಟ್ವಾಳ(reporterkarnataka.com): ತಲೆ ನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ಘಟನೆ ಮಂಚಿಯಲ್ಲಿ ನಡೆದಿದೆ.

ಮಂಚಿ ಸಮೀಪದ ನಿವಾಸಿ ರತಿ ಎಂಬವರ ಮಗಳು ಭವ್ಯಾ (20) ಮೃತಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಭವ್ಯಾ ವಿದ್ಯಾಭ್ಯಾಸ ಮಾಡುತ್ತಿದ್ದರು. ತಲೆನೋವಿಗೆ ಇತ್ತೀಚೆಗೆ ಸ್ಥಳೀಯ ವೈದ್ಯರಲ್ಲಿ ಔಷಧಿ ಪಡೆದಿದ್ದಳು. ಸೋಮವಾರ ರಾತ್ರಿ ಸುಮಾರು 7 ಗಂಟೆ ವೇಳೆ ತಲೆ ನೋವು ಕಾಣಿಸಿಕೊಂಡು ವಾಂತಿ‌ ಮಾಡಿದ್ದಳು.

ರಾತ್ರಿ ವೇಳೆ ತಲೆ ನೋವು ಜಾಸ್ತಿಯಾಗಿ ಮತ್ತೆ ವಾಂತಿ ಮಾಡಿದ್ದಳು. ನಂತರ ಮುಂಜಾನೆ ವೇಳೆಗೆ ಭವ್ಯಾಳನ್ನು ಬಂಟ್ವಾಳ ಸರಕಾರಿ ‌ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ವೈದ್ಯರು‌ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದರು.

ವೆನ್ಲಾಕ್ ಗೆ ಅಂಬ್ಯುಲೆನ್ಸ್ ನಲ್ಲಿ ಸಾಗಿಸುವ ದಾರಿ ಮಧ್ಯೆ ಭವ್ಯಾ ಮೃತಪಟ್ಟಿದ್ದಾರೆ.ಇದೀಗ ಭವ್ಯಾ ಮರಣೋತ್ತರ ಪರೀಕ್ಷೆ ನಡೆದಿದೆ

ಇತ್ತೀಚಿನ ಸುದ್ದಿ

ಜಾಹೀರಾತು