6:53 AM Sunday31 - August 2025
ಬ್ರೇಕಿಂಗ್ ನ್ಯೂಸ್
Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ… Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ… ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ

ಇತ್ತೀಚಿನ ಸುದ್ದಿ

ಪ್ರತಿಭಾನ್ವಿತ ತುಳುರಂಗ ಭೂಮಿ‌ ಕಲಾವಿದ, ಮೌನೇಶ ಆಚಾರ್ಯ ಮಾಣಿ ಇನ್ನಿಲ್ಲ

16/07/2025, 10:29

ಬಂಟ್ವಾಳ(reporterkarnataka.com):ತುಳು ರಂಗಭೂಮಿ‌ಯ ಪ್ರತಿಭಾನ್ವಿತ ಕಲಾವಿದ, ಕಾಪಿಕಾಡು‌ ನಿವಾಸಿ ಮೌನೇಶ ಆಚಾರ್ಯ ಮಾಣಿ(44) ಅವರು ಮಂಗಳವಾರ ಮುಂಜಾನೆ ತಮ್ಮ‌ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.
ಚಿನ್ನದ ಕೆಲಸ‌ ಮಾಡುತ್ತಿದ್ದ ಇವರು ಜೊತೆಗೆ ಮನೆಸಮೀಪವೇ ಚಿಕ್ಕ‌ ದಿನಸಿ‌ ಅಂಗಡಿ ನಡೆಸುತ್ತಿದ್ದರು. ಹಾಸ್ಯಪ್ರಜ್ಞೆ ಉಳ್ಳವರಾಗಿದ್ದ ಇವರು ಜಯಂ ಕಲಾನಿಕೇತನ ಮಾಣಿ ನೃತ್ಯತಂಡದಲ್ಲಿ ಕಲಾವಿದರಾಗಿದ್ದ ಇವರು ಕಲಾಮಾತೆ ನಾಗನವಳಚ್ಚಿಲ್ ತಂಡದ ಕಲಾವಿದರಾಗಿದ್ದು, ಶಾಂತರಾಮ್ ಕಲ್ಲಡ್ಕ ನಿರ್ದೇಶನದ ತುಳು ಅಪ್ಪೆಜೋಕ್ಲು ಕಲಾ ಬಳಗದ ನಾಟಕಗಳಲ್ಲಿಯೂ ಅಭಿನಯಿಸಿದ್ದರು.‌ ಪ್ರಸ್ತುತ ನಮ್ಮ‌ಕಲಾವಿದರು ನೆಲ್ಯಾಡಿ ತುಳುನಾಟಕ ತಂಡದ ಕಲಾವಿದರಾಗಿದ್ದ ಇವರು, ಯುವ ಕಲಾವಿದ ಸಚಿನ್ ಮಾಣಿ ಯವರ ಹಲವು ಹಾಸ್ಯ ವಿಡಿಯೋಗಳಲ್ಲಿ ಅಭಿನಯಿಸಿದವರು. ಸ್ನೇಹಜೀವಿಯಾಗಿದ್ದ ಇವರ ಅಗಲಿಕೆ ಗ್ರಾಮದಲ್ಲಿ ಆಘಾತಕ್ಕೆ ಕಾರಣವಾಗಿದೆ. ಮೃತರು ತಾಯಿ, ಸಹೋದರ, ಪತ್ನಿ, ಪುಟ್ಟಮಗಳು ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು