12:44 PM Thursday31 - October 2024
ಬ್ರೇಕಿಂಗ್ ನ್ಯೂಸ್
ಪಿಎಲ್ಐ ಯೋಜನೆಯಡಿ ಮೆರಿಲ್ ಸುಧಾರಿತ ಉತ್ಪಾದನಾ ಸೌಲಭ್ಯ: ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಜಿ ಸಂಸದ ದ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರಿಗೆ ವಿವಿಧ ಸವಲತ್ತು… ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ… ರಾಜ್ಯ ಸರಕಾರಿ ನೌಕರರ ಸಂಘದ ನಂಜನಗೂಡು ಶಾಖೆ ಚುನಾವಣೆಗೆ ಕೋರ್ಟ್ ತಡೆಯಾಜ್ಞೆ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ;… ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್… ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ ಕಿತ್ತೂರಿನ‌ ಇತಿಹಾಸ ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ: ಸಚಿವ ಸತೀಶ್ ಜಾರಕಿಹೊಳಿ ಬೇಲೆಕೇರಿ ಬಂದರಿನಿಂದ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್… ಬರೋಬ್ಬರಿ 16 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು…

ಇತ್ತೀಚಿನ ಸುದ್ದಿ

ತಾಲಿಬಾನ್ ಉಗ್ರರ ಕೈವಶವಾದ ಅಫ್ಘಾನ್ : ದೇಶ ಬಿಟ್ಟು ಹೋಗಲು ಕಾಬುಲ್ ವಿಮಾನ ನಿಲ್ದಾಣದಲ್ಲಿ ಸಾವಿರಾರು ಜನರ ಪರದಾಟ

16/08/2021, 14:38

Reporterkarnataka.com

ಅಫ್ಘನಿಸ್ತಾನವನ್ನು ತಾಲಿಬಾನ್ ಉಗ್ರರು ತಮ್ಮ ತೆಕ್ಕೆಗೆ ತೆಗೆದುಕೊಂಡ ಬೆನ್ನಲ್ಲೇ ಆತಂಕಗೊಂಡಿರುವ ಜನರು ರಾಷ್ಟ್ರ ತೊರೆಯಲು ತುದಿಗಾಲಲ್ಲಿ ನಿಂತಿದ್ದಾರೆ.

ಸಾವಿರಾರು ಸಂಖ್ಯೆಯ ಜನರು ಕಾಬುಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಈ ನಡುವೆ ವಿಮಾನ ನಿಲ್ದಾಣಕ್ಕೆ ಬಂದಿರುವ ಅಮೆರಿಕಾದ ಸೇನಾಪಡೆಯ ವಿಮಾನವು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಪರಿಣಾಮ ಸ್ಥಳದಲ್ಲಿ ನೆರೆದಿದ್ದ ಜನರು ಆತಂಕಕ್ಕೊಳಗಾಗಿದ್ದಾರೆ.

ನನಗಿಲ್ಲಿ ಬಹಳ ಭಯವಾಗುತ್ತಿದೆ. ಗಾಳಿಯಲ್ಲಿ ಗುಂಡುಗಳನ್ನು ಹಾರಿಸಲಾಗುತ್ತಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಈ ನಡುವೆ ಅಮೆರಿಕಾದ ಅಧಿಕಾರಿಗಳು ಮಾಹಿತಿ ನೀಡಿ, ನಮ್ಮ ರಾಷ್ಟ್ರದ ಅಧಿಕಾರಿಗಳು ವಿದೇಶಿ ಸಿಬ್ಬಂದಿ ಹಾಗೂ ಸ್ಥಳೀಯ ರಾಯಭಾರಿ ಕಚೇರಿಯ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗಲು ಸೇನಾ ವಿಮಾನವಗಳನ್ನು ಕಾಬುಲ್’ಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು