ಇತ್ತೀಚಿನ ಸುದ್ದಿ
ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆ: ದೀಪಾಳಿ ಜಿಲ್ಲಾಮಟ್ಟಕ್ಕೆ ಆಯ್ಕೆ
22/10/2024, 20:40

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ
info.eporterkarnataka@gmail.com
ಐಗಳಿ ಶ್ರೀ ಅಪ್ಪಯ್ಯ ಸ್ವಾಮಿ ಶಿಕ್ಷಣ ಸಂಸ್ಥೆಯ ಎಸ್ ಎ ಎಸ್ ಪ್ರೌಢಶಾಲೆಯಲ್ಲಿ ಇಂದು ನಡೆದ ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಯಲ್ಲಿ ದೀಪಾಲಿ ಸಾಧನೆ ಮಾಡಿದ್ದಾಳೆ.
ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಹಾಗೂ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ಆಕೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಸಂಸ್ಥೆಯ ಅಧ್ಯಕ್ಷ ಡಾ. ಜಿ.ಎ. ಹಿರೇಮಠ. ಸೆಕ್ರೆಟರಿ ಎಸ್. ಬಿ. ಕೆಂಪಿ, ಆಡಳಿತ ಮಂಡಳಿಯ ಸದಸ್ಯರು, ಶಾಲೆಯ ಪ್ರಾಚಾರ್ಯರು, ಮುಖ್ಯೋಪಾಧ್ಯಾಯರು, ಆಡಳಿತ ಅಧಿಕಾರಿಗಳು, ಮ್ಯಾನೇಜರ್, ದೈಹಿಕ ಶಿಕ್ಷಕರು ವಿದ್ಯಾರ್ಥಿನಿಗ ರಾಜ್ಯಮಟ್ಟಕ್ಕೆ ಆಯ್ಕೆಯಾಗಲೆಂದು ಶುಭ ಹಾರೈಸಿದ್ದಾರೆ.