ಇತ್ತೀಚಿನ ಸುದ್ದಿ
ತಾಲೂಕು ಅಧ್ಯಕ್ಷರ ನೇಮಕ ವಿಚಾರ: ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ; ತಾಪಂ ಮಾಜಿ ಅಧ್ಯಕ್ಷರ ಮೇಲೆ ಹಲ್ಲೆ
09/02/2024, 21:28
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ
ಭುಗಿಲೆದ್ದಿದೆ. ತಾಲೂಕಿನ ವಿವಿಧ ಮಂಡಲ, ಮೋರ್ಚಾ ಅಧ್ಯಕ್ಷರ ನೇಮಕ ವಿಚಾರದಲ್ಲಿ ಅಸಮಾಧಾನ ತಾರಕ್ಕೇರಿದೆ.
ಮೂಡಿಗೆರೆ ತಾಲೂಕು ಅಧ್ಯಕ್ಷರ ನೇಮಕ ವಿಚಾರದಲ್ಲಿ ಬಿಜೆಪಿ ಜಗಳ ಇದೀಗ ಬೀದಿಗೆ ಬಂದಿದೆ.
ತಾಲೂಕು ಅಧ್ಯಕ್ಷರ ಕಣದಲ್ಲಿ 12 ಜನ ಆಕಾಂಕ್ಷಿಗಳಿದ್ದರು.
ನೂತನ ಅಧ್ಯಕ್ಷರ ಹೆಸರು ಘೋಷಣೆ ಆಗುತ್ತಿದ್ದಂತೆ ಅಸಮಾಧಾನ ಸ್ಫೋಟಗೊಂಡಿದೆ.
ಮೂಡಿಗೆರೆ ತಾಲೂಕಿನ ಬಿಜೆಪಿ ಅಧ್ಯಕ್ಷರಾಗಿ ಟಿ.ಎಂ.ಗಜೇಂದ್ರ ಆಯ್ಕೆಗೊಂಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಅವರು ನೇಮಕದ ಆದೇಶ ಹೊರಡಿಸಿದ್ದಾರೆ.
ಈ ನಡುವೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಸಿ.ರತನ್ ಮೇಲೆ ಹಲ್ಲೆ ನಡೆಸಲಾಗಿದೆ. ಕೆ.ಸಿ.ರತನ್ ಹಸ್ತ ಕ್ಷೇಪದಿಂದ ಅಧ್ಯಕ್ಷ ಸ್ಥಾನ ಕೈತಪ್ಪಿದೆ ಎಂದು ಹಲ್ಲೆ ನಡೆದಿದೆ.
ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಪುಟ್ಟಣ್ಣ ಹಾಗೂ ಮತ್ತೋರ್ವ ಆಕಾಂಕ್ಷಿ ಭರತ್ ರಿಂದ ಹಲ್ಲೆ ಆರೋಪ.
ತೀವ್ರ ಹಲ್ಲೆಗೆ ಒಳಗಾಗಿರುವ ಕೆ.ಸಿ. ರತನ್ ಅವರನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.