3:37 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ತಂಬಾಕು ಮಾರಾಟ: ಪಾಲಿಕೆ ಅಧಿಕಾರಿಗಳ ತಂಡದಿಂದ ದಿಢೀರ್ ಕಾರ್ಯಾಚರಣೆ; 32 ಪ್ರಕರಣ ದಾಖಲು

23/01/2023, 17:53

ಮಂಗಳೂರು(reporterkarnataka.com) ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳ ತಂಡ ಸೋಮವಾರ ನಗರದ ವಿವಿಧೆಡೆ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ 32 ಪ್ರಕರಣಗಳನ್ನು ದಾಖಲಿಸಿವೆ.


ಏಕಕಾಲದಲ್ಲಿ ನಗರದ ಬಿಜೈ ಹಾಗೂ ಕೆಎಸ್ಸಾರ್ಟಿಸಿ ಬಸ್ ಸ್ಟಾಂಡ್ ಮುಂಭಾಗದಲ್ಲಿ ಪ್ಲಾಸ್ಟಿಕ್ ಮತ್ತು ತಂಬಾಕು ನಿಯಂತ್ರಣ ಕಾರ್ಯಾಚರಣೆ ನಡೆಸಲಾಯಿತು. ಅಧಿಕಾರಿಗಳು ಸ್ಥಳದಲ್ಲಿಯೇ 32 ಪ್ರಕರಣ ದಾಖಲಿಸಿ 4 ಸಾವಿರ ರೂ. ದಂಡ ಸಂಗ್ರಹಿಸಲಾಯಿತು. ಸೆಕ್ಷನ್ 5ರ ಆಡಿ ನಾಲ್ಕು ನಾಮಫಲಕ ತೆರವುಗೊಳಿಸಲಾಯಿತು.

ಅಂಗಡಿಗಳಿಗೆ ಎಚ್ಚರಿಕೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಸಾಕಷ್ಟು ಪ್ಲಾಸ್ಟಿಕ್ ವಸ್ತುಗಳನ್ನು ವಶ ಪಡೆದು ಎಚ್ಚರಿಕೆ ನೀಡಿದರು.
ಕಾರ್ಯಾಚರಣೆಯಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳಾದ ಜಯಶಂಕರ್, ಭಾಸ್ಕರ್, ಅಶ್ವಿನಿ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪುಂಡಲೀಕ ಲಕಾಟಿ, ಶೃತಿ ಸಾಲಿಯಾನ್ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು