3:03 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ತಮಿಳುನಾಡು ಮುಖ್ಯಮಂತ್ರಿ ವಿಜಯನ್ ಜೂ.12ರಂದು ಕೊಲ್ಲೂರು ದೇಗುಲಕ್ಕೆ ಭೇಟಿ: ಮೂಕಾಂಬಿಕೆಯ ದರ್ಶನ

10/06/2026, 21:42

ಉಡುಪಿ(reporterkarnataka.com): ತಮಿಳುನಾಡು ನೂತನ ಮುಖ್ಯಮಂತ್ರಿ ಹಾಗೂ ಖ್ಯಾತ ನಟರಾದ ಜೋಸೆಫ್ ವಿಜಯ್ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಜೂನ್ 12ರಂದು ಭೇಟಿ ನೀಡಲಿದ್ದಾರೆ.
ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಅವರು ಕೊಲ್ಲೂರು ಕ್ಷೇತ್ರಕ್ಕೆ ಆಗಮಿಸುತ್ತಿರುವುದು ವಿಶೇಷವಾಗಿದೆ.

*ಯಾವಾಗ ಭೇಟಿ?:*
ಜೂನ್ 12 ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೊಲ್ಲೂರಿಗೆ ಆಗಮಿಸಲಿರುವ ಸಿಎಂ ವಿಜಯ್, ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ದರ್ಶನದ ಬಳಿಕ ಚೆನ್ನೈಗೆ ವಾಪಸ್ ತೆರಳಲಿದ್ದಾರೆ.
ಮೂಕಾಂಬಿಕಾ ದೇವಿ ದರ್ಶನ, ಪೂಜಾ ಕಾರ್ಯಕ್ರಮ ಮುಗಿದ ಬಳಿಕ ಸಿಎಂ ವಿಜಯ್ ಮಂಗಳೂರಿಗೆ ತೆರಳಿ ಅಲ್ಲಿನ ವಿಮಾನ ನಿಲ್ದಾಣದಿಂದ ಚೆನ್ನೈಗೆ ಪ್ರಯಾಣ ಬೆಳೆಸಲಿದ್ದಾರೆ. ಅವರ ಭೇಟಿಗೆ ಸಂಬಂಧಿಸಿದಂತೆ ಸ್ಥಳೀಯ ಆಡಳಿತ ಹಾಗೂ ಪೊಲೀಸ್ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿವೆ.

*ದೇಶದ ಗಣ್ಯರ ನೆಚ್ಚಿನ ಶಕ್ತಿಪೀಠ ಮೂಕಾಂಬಿಕಾ ಕ್ಷೇತ್ರ:*
ಕೊಲ್ಲೂರು ಮೂಕಾಂಬಿಕಾ ದೇವಾಲಯವು ದೇಶದ ಪ್ರಸಿದ್ಧ ಶಕ್ತಿಪೀಠಗಳಲ್ಲಿ ಒಂದಾಗಿದ್ದು, ರಾಜಕೀಯ ನಾಯಕರು, ಚಿತ್ರರಂಗದ ಗಣ್ಯರು, ಉದ್ಯಮಿಗಳು ಸೇರಿದಂತೆ ಅನೇಕ ಗಣ್ಯರು ಆಗಾಗ್ಗೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆಯುತ್ತಾರೆ. ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಹಾಗೂ ಸಿನಿಮಾ ತಾರೆಯರು ಸಹ ಈ ಕ್ಷೇತ್ರಕ್ಕೆ ಭೇಟಿ ನೀಡಿರುವ ಇತಿಹಾಸವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು