1:16 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

‘ಮೇಕೆದಾಟು’ಗೆ ತಮಿಳುನಾಡು, ಕೇರಳ, ಪುದುಚೇರಿ ಒಪ್ಪಿಗೆ ಬೇಕಿಲ್ಲ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರದ ಸ್ಪಷ್ಟನೆ

27/07/2026, 22:23

ನವದೆಹಲಿ(reporterkarnataka.com): ಪ್ರಸ್ತಾವಿತ ಮೇಕೆದಾಟು ಯೋಜನೆಯಲ್ಲಿ ಕರ್ನಾಟಕ ಸರ್ಕಾರಕ್ಕೆ ಗುಡ್ ನ್ಯೂಸ್ ಸಿಕ್ಕಿದೆ. ಮೇಕೆದಾಟು ಯೋಜನೆ ಜಾರಿಗೆ ತಮಿಳುನಾಡು ಸರ್ಕಾರ ಪದೇ ಪದೇ ಅಡ್ಡಗಾಲು ಹಾಕುತ್ತಿತ್ತು. ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಅಪಸ್ವರ ಎತ್ತುತ್ತಿತ್ತು. ಇದೀಗ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರದ ಒಪ್ಪಿಗೆಯೇ ಅಗತ್ಯವಿಲ್ಲವಂತೆ! ಹೀಗಂತ ಖುದ್ದು ಕೇಂದ್ರ ಸರ್ಕಾರ ಇಂದು ರಾಜ್ಯಸಭೆ ಕಲಾಪದಲ್ಲಿ ತಿಳಿಸಿದೆ.

*ಮೇಕೆದಾಟು ಯೋಜನೆಗೆ ತಮಿಳುನಾಡು ಒಪ್ಪಿಗೆ ಬೇಕಿಲ್ಲ:*
ಕರ್ನಾಟಕದ ಪ್ರಸ್ತಾವಿತ ಮೇಕೆದಾಟು ಜಲಾಶಯ ಯೋಜನೆಗೆ ತಮಿಳುನಾಡಿನ ಸಮ್ಮತಿ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ರಾಜ್ಯಸಭೆಯಲ್ಲಿ ತಮಿಳುನಾಡಿನ ಸಂಸದ ಅನ್ಬುಮಣಿ ರಾಮದಾಸ್ ಅವರ ಪ್ರಶ್ನೆಗೆ ಉತ್ತರಿಸಿದ ಜಲಶಕ್ತಿ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ, ಲಿಖಿತ ಉತ್ತರ ನೀಡಿದ್ದಾರೆ.
ಕೇರಳಂ, ತಮಿಳುನಾಡು, ಪುದುಚೇರಿ ಒಪ್ಪಿಗೆ ಬೇಕಿಲ್ಲ
2018ರ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಯಾವುದೇ ನಿರ್ಮಾಣಕ್ಕೆ ಕರ್ನಾಟಕವು ತಮಿಳುನಾಡು, ಕೇರಳಂ ಅಥವಾ ಪುದುಚೇರಿಯಿಂದ ಅನುಮತಿ ಪಡೆಯಬೇಕು ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 2007ರ ಕಾವೇರಿ ನೀರು ವಿವಾದ ನ್ಯಾಯ ಮಂಡಳಿಯ ತೀರ್ಪಿನ 18ನೇ ವಿಧಿಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಆದೇಶಕ್ಕೆ ಧಕ್ಕೆಯಾಗದಂತೆ ತಮ್ಮ ಗಡಿಯೊಳಗೆ ನೀರಿನ ಬಳಕೆಯನ್ನು ನಿಯಂತ್ರಿಸುವ ಹಕ್ಕು ರಾಜ್ಯಗಳಿಗೆ ಇದೆ ಅಂತ ರಾಜ್ ಭೂಷಣ್ ಚೌಧರಿ ಹೇಳಿದ್ದಾರೆ.

*ಕರ್ನಾಟಕಕ್ಕೆ ಅನುಕೂಲ:*
ಮೇಕೆದಾಟು ಯೋಜನೆ ಬೆಂಗಳೂರಿಗೆ ಕುಡಿಯುವ ನೀರು ಒದಗಿಸಲು ಮತ್ತು ಹೆಚ್ಚುವರಿ ನೀರನ್ನು ಸಂಗ್ರಹಿಸಲು ಉದ್ದೇಶಿಸಲಾಗಿತ್ತು. ಕರ್ನಾಟಕ ಸರ್ಕಾರ 2019ರಲ್ಲಿ ಸಲ್ಲಿಸಿದ್ದ ವಿಸ್ತೃತ ಯೋಜನಾ ವರದಿ (DPR) ಹಿಂತಿರುಗಿಸಲಾಗಿದ್ದು, ನ್ಯಾಯಮಂಡಳಿ ಆದೇಶ ಮತ್ತು ಕೇಂದ್ರ ಜಲ ಆಯೋಗದ ಮಾರ್ಗದರ್ಶನಕ್ಕೆ ಅನುಗುಣವಾಗಿ ಪರಿಷ್ಕೃತ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಸ್ಪಷ್ಟನೆ ಕರ್ನಾಟಕಕ್ಕೆ ಅನುಕೂಲಕರವಾಗಿದ್ದು, ಯೋಜನೆ ಮುಂದುವರಿಕೆಗೆ ದಾರಿ ಮಾಡಿಕೊಡುತ್ತದೆ.

*ಮೇಕೆದಾಟು ಯೋಜನೆಗೆ ವಿಜಯ್ ವಿರೋಧ:*
ಅತ್ತ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಹಾಗೂ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮೇಕೆದಾಟು ಯೋಜನೆಯನ್ನು ತೀವ್ರವಾಗಿ ವಿರೋಧಿಸುತ್ತಿದೆ. ಸಿಎಂ ಸಿ. ಜೋಸೆಫ್ ವಿಜಯ್ ಅವರು ಈ ವಿಚಾರದಲ್ಲಿ ಸ್ಪಷ್ಟ ಮತ್ತು ಕಠಿಣ ನಿಲುವು ತೆಗೆದುಕೊಂಡಿದ್ದಾರೆ. ಜೂನ್ 19, 2026ರಂದು ಸಿಎಂ ವಿಜಯ್ ಮಂಡಿಸಿದ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.

*ಕರ್ನಾಟಕದ ವಿರುದ್ಧ ನಿರ್ಣಯ ಅಂಗೀಕಾರ:*
ಕರ್ನಾಟಕದ ಏಕಪಕ್ಷೀಯ ಪ್ರಯತ್ನವನ್ನು ಖಂಡಿಸಿ, ಕಾವೇರಿ ಜಲ ವಿವಾದ ನ್ಯಾಯಮಂಡಳಿಯ 2007ರ ಅಂತಿಮ ತೀರ್ಪು ಮತ್ತು 2018ರ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸುತ್ತದೆ ಎಂದು ತಮಿಳುನಾಡು ಸರ್ಕಾರ ಆರೋಪಿಸಿತ್ತು. ಕೇಂದ್ರ ಸರ್ಕಾರವು ತಾಂತ್ರಿಕ, ಪರಿಸರ, ಅರಣ್ಯ ಅಥವಾ ಯಾವುದೇ ಅನುಮೋದನೆ ನೀಡಬಾರದು ಎಂದು ಒತ್ತಾಯಿಸಲಾಗಿತ್ತು. ಕೇಂದ್ರ ಜಲ ಆಯೋಗ (CWC) ಡಿಪಿಆರ್ ಪರಿಶೀಲಿಸಬಾರದು ಎಂದೂ ಕೋರಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು