9:23 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ತಮಿಳುನಾಡು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ: ಮಗು, ಮಹಿಳೆ ಸಹಿತ ಕನಿಷ್ಠ 7 ಮಂದಿ ಸಾವು; 20 ಮಂದಿಗೆ ಗಾಯ

13/12/2024, 11:25

ಚೆನ್ನೈ(reporterkarnataka.com): ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಪ್ರಮುಖ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 6 ಮಂದಿ ರೋಗಿಗಳು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಗುರುವಾರ ರಾತ್ರಿ ಈ ಘೋರ ದುರಂತ ಸಂಭವಿಸಿದೆ. ಸ್ಥಳೀಯ ಅಧಿಕಾರಿಗಳ ಪ್ರಕಾರ ಮೃತರಲ್ಲಿ ಒಂದು ಮಗು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ. ನೆಲ ಮಹಡಿಯಲ್ಲಿನ ರಿಸೆಪ್ಷನ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಕ್ಷಣಮಾತ್ರದಲ್ಲಿ ಅದು ಇಡೀ ಆಸ್ಪತ್ರೆಯನ್ನು ವ್ಯಾಪಿಸಿದೆ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದೆಂದು ಶಂಕಿಸಲಾಗಿದೆ.
ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಪ್ರಕಾರ, ಅಗ್ನಿ ಅವಘಡದಿಂದಾಗಿ ಆಸ್ಪತ್ರೆಯಲ್ಲಿ ಆವರಿಸಿದ ದಟ್ಟವಾದ ಹೊಗೆಯಿಂದ ಹಲವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ರಿಸೆಪ್ಷನ್​ ಹಾಲ್​ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ಬೆಂಕಿ ಹೊತ್ತಿಕೊಳ್ಳಲು ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ.
ಸರಿಸುಮಾರು 50 ಆಂಬ್ಯುಲೆನ್ಸ್‌ಗಳನ್ನು ಬಳಸಿಕೊಂಡು ರೋಗಿಗಳನ್ನು ಸುರಕ್ಷಿತ ಸ್ಥಳಗಳಿಗೆ, ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಕನಿಷ್ಠ 30 ರೋಗಿಗಳನ್ನು ಚಿಕಿತ್ಸೆಗಾಗಿ ದಿಂಡುಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಕಿಯನ್ನು ಹತೋಟಿಗೆ ತರಲು ಅಗ್ನಿಶಾಮಕ ದಳದ ಸಿಬ್ಬಂದಿ ಒಂದು ಗಂಟೆಗೂ ಹೆಚ್ಚು ಕಾಲ ಹರಸಾಹಸಪಟ್ಟರು. ಕೊನೆಗೂ ಬೆಂಕಿ ನಂದಿಸುವಲ್ಲಿ ಅವರು ಯಶಸ್ವಿಯಾಗಿದ್ದು, ಆಸ್ಪತ್ರೆಯ ಒಳಗೆ ಸಿಲುಕಿರುವವರನ್ನು ಪತ್ತೆಹಚ್ಚಿ ರಕ್ಷಿಸುವ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು