1:42 AM Friday19 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ತನಿಖೆ ನೆಪದಲ್ಲಿ  ಅಮಾಯಕರ ಮನೆಗೆ ನುಗ್ಗಿ ಬೆದರಿಸಿದರೆ ಧರಣಿ ನಡೆಸುವೆ: ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ

30/07/2022, 13:25

ಮಂಗಳೂರು(reporterkarnataka.com):   ಕೊಲೆ ಮಾಡಿದ ಆರೋಪಿಗಳು ಬಳಸಿದ ವಾಹನ , ಸಿಸಿಟಿವಿ ಕ್ಯಾಮೆರಾ ದೃಶ್ಯಗಳು ನಿಮ್ಮ ಇಲಾಖೆಗೆ ಸಿಕ್ಕಿದ್ದರೂ ನೈಜ ಆರೋಪಿಗಳನ್ನು ಬಂಧಿಸುವುದನ್ನು ಬಿಟ್ಟು ತನಿಖೆಯ ನೆಪದಲ್ಲಿ

ಅಮಾಯಕ ಕಾರ್ಯಕರ್ತರನ್ನು ಎಳೆದುಕೊಂಡು ಹೋಗಿ ಕಿರುಕುಳ ನೀಡಿದರೆ ಕಾರ್ಯಕರ್ತರ ಪರವಾಗಿ ನಿಮ್ಮ ಮುಖ್ಯ ಕಚೇರಿಯ ಎದುರು ಪ್ರತಿಭಟ ನಡೆಸಬೇಕಾಗುತ್ತದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಪೊಲೀಸ್ ಆಯುಕ್ತರಿಗೆ ಎಚ್ಚರಿಕೆ ನೀಡಿದ್ದಾರೆ.

ಸಾಕ್ಷ್ಯಾಧಾರ ನಿಮ್ಮ ಕೈಯ್ಯಲ್ಲಿದೆ. ಆರೋಪಿಗಳನ್ನು ಬಂಧಿಸಿ ಇದಕ್ಕೆ ನನ್ನ ಸಂಪೂರ್ಣ ಸಹಕಾರ ಇದೆ.

ಆದರೆ ಅಮಾಯಕ ಕಾರ್ಯಕರ್ತರ ಮನೆಗೆ ನುಗ್ಗಿ, ಅವರ ಕುಟುಂಬದಲ್ಲಿ ಭೀತಿ ಹುಟ್ಟಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬಾರದು.ಈ ಬಗ್ಗೆ ನನಗೆ ದೂರುಗಳು ಬರುತ್ತಿದ್ದು,

ನಿಮ್ಮ ಅನುಚಿತ ವರ್ತನೆಯ ಬಗ್ಗೆ ಗೃಹ ಸಚಿವರಿಗೆ ದೂರು ನೀಡಲಿದ್ದೇನೆ ಎಂದಿದ್ದಾರೆ.

ನಾನು  ಪದವಿಗಿಂತ ಕಾರ್ಯಕರ್ತರ ಹಿತವೇ ಮುಖ್ಯ ಎಂದು ಪರಿಗಣಿಸಿದ್ದೇನೆ. ಕಾರ್ಯಕರ್ತರ ಕುಟುಂಬಕ್ಕೆ  ನೋವುಂಟು ಮಾಡಿದರೆ ಸಹಿಸಲಾಗದು. ತಕ್ಷಣ ನೈಜ ಆರೋಪಿಗಳ ಪತ್ತೆಗೆ ಕ್ರಮ ಜರುಗಿಸಿ ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು