6:01 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ತರಗತಿ, ಲೈಬ್ರೆರಿಗಳಿಗೆ ಹಿಜಾಬ್‌ ಧರಿಸಲು ಅವಕಾಶ ಇಲ್ಲ: ಮಂಗಳೂರು ವಿವಿ ಕಾಲೇಜು ಸಮಿತಿಯಿಂದ ನಿರ್ಧಾರ

28/05/2022, 18:30

ಮಂಗಳೂರು(reporterkarnataka.com) : ಮಂಗಳೂರು ವಿವಿ ಕಾಲೇಜಿನ ಕ್ಯಾಂಪಸ್‌ಗೆ ಹಿಜಾಬ್‌ ಧರಿಸಿ ಬರಬಹುದು. ಆದರೆ ತರಗತಿ, ಲೈಬ್ರೆರಿಗಳಿಗೆ ಹಿಜಾಬ್‌ ಧರಿಸಿ ಬರಲು ಅವಕಾಶ ಇಲ್ಲ ಎಂಬ ನಿರ್ಣಯಕ್ಕೆ ಕಾಲೇಜು ಅಭಿವೃದ್ಧಿ ಸಮಿತಿ ಬಂದಿದೆ.

ಶಾಸಕ ವೇದವ್ಯಾಸ ಕಾಮತ್‌, ಮಂಗಳೂರು ವಿ.ವಿ. ಕುಲಪತಿ ಪ್ರೊ. ಪಿ.ಎಸ್‌. ಯಡಪಡಿತ್ತಾಯ,ಕಾಲೇಜು ಪ್ರಾಂಶುಪಾಲೆ, ಸಿಂಡಿಕೇಟ್‌ ಸದಸ್ಯರು ಭಾಗವಹಿಸಿದ್ದರು.

ಹಿಜಾಬ್‌ಗ ತರಗತಿಯಲ್ಲಿ ನಿಷೇಧವಿದ್ದು, ಇದನ್ನು ಕಟ್ಟುನಿಟ್ಟು ಪಾಲಿಸಲಾಗುತ್ತದೆ. ನಿಯಮ ಪಾಲನೆಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಯಡಪಡಿತ್ತಾಯ ತಿಳಿಸಿದರು.

ಹೈಕೋರ್ಟ್‌ ಆದೇಶ ಬಳಿಕ ಪರೀಕ್ಷಾ ಪ್ರಕ್ರಿಯೆ ಇದ್ದ ಹಿನ್ನೆಲೆಯಲ್ಲಿ ಮಾರ್ಗಸೂಚಿ ಕಳುಹಿಸಲು ತಡವಾಯಿತು. ಆ ಬಳಿಕ ಸಿಂಡಿಕೇಟ್‌ ಸಭೆ ನಡೆಸಿ ಕ್ರಮ ಕೈಗೊಂಡಿದ್ದೇವೆ. ಇದರ ಪಾಲನೆ ವಿಚಾರದಲ್ಲಿ ಶಿಕ್ಷಕರ ವಿರುದ್ಧ ದೂರಿಗೆ ಸಾಕ್ಷ್ಯ ಇದ್ದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಮುಸ್ಲಿಂ ವಿದ್ಯಾರ್ಥಿನಿಯರು ಬಂದಾಗ ಅವರಿಗೆ ತಿಳಿವಳಿಕೆ ಹೇಳಿದ್ದೇವೆ. ಆದರೆ ಅವರು ಡಿಸಿ ಬಳಿ ಹೋಗುತ್ತೇನೆ ಎಂದಾಗ ಹೋಗಿ ಎಂದಿದ್ದೇನೆ. ವಿದ್ಯಾರ್ಥಿನಿಯರಿಗೆ ಕೌನ್ಸೆಲಿಂಗ್‌ ಮಾಡುತ್ತೇವೆ. ಇಲ್ಲವೇ ಬೇರೆ ಕಾಲೇಜಿಗೆ ಹೋಗುವುದಾದರೆ ವ್ಯವಸ್ಥೆ ಮಾಡುತ್ತೇವೆ ಎಂದರು.

ಶಾಸಕ ಕಾಮತ್‌ ಮಾತನಾಡಿ, ನಮಗೆ ಬಂದ ಆದೇಶದ ಪ್ರಕಾರ ಪದವಿ ಕಾಲೇಜಿಗೂ ಕೋರ್ಟ್‌ ಆದೇಶ ಅನ್ವಯ ಆಗುತ್ತದೆ. ಅದನ್ನು ಪಾಲಿಸಲೇಬೇಕು ಎಂದರು.

ಮಂಗಳೂರು ವಿವಿ ಕಾಲೇಜನ್ನು ದಿಲ್ಲಿಯ ಜೆಎನ್‌ಯು ಮಾಡಲು ನಾವು ಅವಕಾಶ ನೀಡುವುದಿಲ್ಲ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಹೇಳಿದ್ದಾರೆ.

ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕಾಲೇಜಿನಲ್ಲಿ ರಾಜಕೀಯ ಮಾಡಿ ಎಸ್‌ಡಿಪಿಐ, ಮತ್ತು ಕಾಂಗ್ರೆಸ್‌ ಬೆಂಬಲಿತರು ವಿದ್ಯಾರ್ಥಿಗಳನ್ನು ಎತ್ತಿ ಕಟ್ಟಿದ್ದಾರೆ. ಮಂಗಳೂರಿನ ಮಣ್ಣಿನಲ್ಲಿ ಹುಟ್ಟಿದವರಿಗೆ ದೇಶ ಹಾಳು ಮಾಡಲು ಅವಕಾಶ ಇಲ್ಲ. ಸರಕಾರ ಮತ್ತು ಕೋರ್ಟ್‌ ನಿಯಮ ಪಾಲಿಸದೇ ಇದ್ದರೆ ಅಧ್ಯಾಪಕರೇ ಕೋರ್ಟ್‌ ಮೆಟ್ಟಲು ಹತ್ತಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ನಡುವೆ ವಿ.ವಿ. ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿನ್ಯಾಸ್‌ ಆಚಾರ್ಯ ರಾಜೀನಾಮೆ ನೀಡಿ ದ್ದಾರೆ. ಅವರು ಎಬಿವಿಪಿ ಬೆಂಬಲ ದಿಂದ ಆಯ್ಕೆಯಾಗಿದ್ದರು. ಹಿಜಾಬ್‌ಗ ನನ್ನದೂ ವಿರೋಧ ಇತ್ತು, ಆದರೆ ಪ್ರತಿಭಟನೆ ಮಾಡಿದರೆ ಕಾಲೇಜಿನಲ್ಲಿ ವಿನಾಕಾರಣ ಗಲಭೆ ಆಗುತ್ತದೆ ಎಂಬ ಕಾರಣಕ್ಕೆ ಪ್ರತಿಭಟನೆ ಬೇಡ ಎಂದಿದ್ದೆ, ನನ್ನ ಈ ನಿರ್ಧಾರ ತಪ್ಪು ಎಂದಾದರೆ ನಾನು ಅಧ್ಯಕ್ಷನಾಗಿದ್ದು ಪ್ರಯೋಜನ ಇಲ್ಲ ಹಾಗಾಗಿ ರಾಜೀನಾಮೆ ನೀಡಿ ದ್ದೇನೆ ಎಂದವರು ತಿಳಿಸಿದ್ದಾರೆ.

ಕಾಲೇಜಿನಲ್ಲಿ 44 ಮುಸ್ಲಿಂ ವಿದ್ಯಾರ್ಥಿನಿಯರಿದ್ದು, ಹಿಜಾಬ್‌ ವಿವಾದ ಒಂದು ತಂಡದಿಂದಷ್ಟೇ ಆಗಿದೆ. 15 ವಿದ್ಯಾರ್ಥಿಗಳಷ್ಟೇ ಹಿಜಾಬ್‌ ಕುರಿತು ಮಾತನಾಡುತ್ತಿದ್ದಾರೆ ಎಂದು ಪ್ರಾಂಶುಪಾಲೆ ಡಾ| ಅನಸೂಯ ರೈ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು