ಇತ್ತೀಚಿನ ಸುದ್ದಿ
Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು ದಾಳಿ: ಬಾಲಕ ಗಂಭೀರ ಗಾಯ
28/11/2025, 22:04
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಸುಮಾರು 11 ವರ್ಷದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ತರೀಕೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ನಡೆದಿದೆ.
ವಾರದ ಹಿಂದಷ್ಟೆ 5 ವರ್ಷದ ಬಾಲಕಿ ಚಿರತೆ ದಾಳಿಗೆ ಬಲಿಯಾದ ಘಟನೆ ಮಾಸುವ ಮುನ್ನವೇ ಈ ಘಟನೆ ನಡೆದಿದೆ. ಹೃದಯ್ ಚಿರತೆ ದಾಳಿಗೊಳಗಾದ ಬಾಲಕ ಎಂದು ತಿಳಿದು ಬಂದಿದೆ.
ಮನೆಯ ಬಳಿ ನಿಂತಿದ್ದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದೆ. ಗಂಭೀರ ಗಾಯಗೊಂಡ ಬಾಲಕ ಶಿಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಿಂಗದಹಳ್ಳಿ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.












