ಇತ್ತೀಚಿನ ಸುದ್ದಿ
ತರೀಕೆರೆ: ಖಾಸಗಿ ಬಸ್ ನುಗ್ಗಿ ಗಂಭೀರ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿನಿಯರ ಪೈಕಿ ಓರ್ವ ಬಾಲಕಿ ಸಾವು
07/09/2023, 17:46
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ವೊಂದು ಹರಿದು ಗಂಭೀರ ಗಾಯಗೊಂಡಿದ್ದ ಇಬ್ಬರು ಬಾಲಕಿಯ ಪೈಕಿ ಒಬ್ಬಳು ಬಾಲಕಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾಳೆ.
ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ಬಳಿ ನಡೆದ ಈ ದುರ್ಘಟನೆಯಲ್ಲಿ ತುಳಸಿ(15) ಹಾಗೂ ನಿವೇದಿತಾ(14) ಎಂಬ ಬಾಲಕಿಯರು ಗಂಭೀರ ಗಾಯಗೊಂಡಿದ್ದರು. ಇವರ ಪೈಕಿ ತುಳಸಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ತುಳಸಿ, ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಳು.
ತರೀಕೆರೆ ತಾಲೂಕಿನ ಸೀತಾಪುರ ಕಾವಲು ನಿವಾಸಿಯಾದ
ಮಂಜು-ಲತಾ ದಂಪತಿಯ ಪುತ್ರಿ. ತುಳಸಿ ತಂದೆ-ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಬಸ್ ಚಾಲಕನ ಓವರ್ ಸ್ಪೀಡ್ ನಿಂದ ಕಂಟ್ರೋಲ್ ತಪ್ಪಿದ ಬಸ್ ಮಕ್ಕಳ ಮೇಲೆ ನುಗ್ಗಿದೆ.
ಕೂದಲೆಳೆ ಅಂತರದಲ್ಲಿ ಐವರು ಮಕ್ಕಳು ಪಾರಾಗಿದ್ದಾರೆ.
ಗಂಭೀರ ಗಾಯಗೊಂಡ ಮಕ್ಕಳನ್ನು ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆಸ್ಪತ್ರೆಗೆ ಸಾಗಿಸಲಾಗಿತ್ತು. ಬಸ್
ಡಿಕ್ಕಿ ರಭಸಕ್ಕೆ ಮನೆಯ ಮುಂಭಾಗದ ಛಾವಣಿ ಸಂಪೂರ್ಣ ಜಖಂಗೊಂಡಿದೆ.
ಏಕಾಏಕಿ ರಸ್ತೆ ಬದಿಯ ಬಸ್ ನಿಲ್ದಾಣ ಹಾಗೂ ಮನೆಗಳತ್ತ ಬಸ್ ನುಗ್ಗಿದೆ. ನಿಯಂತ್ರಣ ತಪ್ಪಿದ ಬಸ್ ಕಂಡು ರಸ್ತೆ ಬದಿ ಪ್ರಯಾಣಿಕರು ಚೆಲ್ಲಾಪಿಲ್ಲಿಯಾಗಿ ಓಡಿ ಪ್ರಾಣ ಉಳಿಸಿಕೊಂಡಿದ್ದರು. ಅತೀ ವೇಗದ ಖಾಸಗಿ ಬಸ್ ಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ತರೀಕೆರೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.