9:35 AM Monday28 - September 2026
ಬ್ರೇಕಿಂಗ್ ನ್ಯೂಸ್
ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ…

ಇತ್ತೀಚಿನ ಸುದ್ದಿ

ತರೀಕೆರೆ: ಆತ್ಮರಕ್ಷಣೆಗೆಂದು ಅಧಿಕಾರಿಗಳು ಹಾರಿಸಿದ ಗುಂಡಿಗೆ ಚಿರತೆ ಸಾವು; ಪ್ರಾಣಿಪ್ರಿಯರ ಆಕ್ರೋಶ

30/11/2025, 15:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿರತೆ ಸೆರೆ ವೇಳೆ ಆತ್ಮರಕ್ಷಣೆಗೆಂದು ಅಧಿಕಾರಿಗಳು ಹಾರಿಸಿದ ಗುಂಡಿನಿಂದ ಚಿರತೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದ್ದು, ಇದು ಅಧಿಕಾರಿಗಳೇ ಮಾಡಿದ ಕೊಲೆ ಎಂದು ಪ್ರಾಣಿಪ್ರಿಯರು ಹಾಗೂ ಪರಿಸರವಾದಿಗಳು ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ನಿನ್ನೆ ತರೀಕೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಮನೆ ಬಳಿಯಿದ್ದ 11 ವರ್ಷದ ಯುವಕನ ಮೇಲೆ ಚಿರತೆ ದಾಳಿ ಮಾಡಿತ್ತು. ತೀವ್ರ ಗಾಯಗೊಂಡಿದ್ದ ಯುವಕನನ್ನು ತರೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 11 ವರ್ಷದ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದನು. ಆದರೆ, ಚಿರತೆಯ ಸೇವೆಗೆ ಅರಣ್ಯ ಇಲಾಖೆ ಮುಂದಾಗಿತ್ತು. ಇಂದು ಬೈರಾಪುರ ಗ್ರಾಮದಲ್ಲಿ ಚಿರತೆ ಇರುವುದನ್ನ ಖಚಿತ ಪಡಿಸಿಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೇರಿಗೆ ಮುಂದಾಗಿದ್ದರು. ಈ ವೇಳೆ ಗಿಡ-ಘಂಟೆಗಳ ಮಧ್ಯೆಯಿಂದ ಚಿರತೆ ಹಾರಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಆತ್ಮ ರಕ್ಷಣೆಗಾಗಿ ಚಿರತೆಯ ಮೇಲೆ ಗುಂಡು ಹಾರಿಸಿದ್ದಾರೆ. ಆದರೆ, ಚಿರತೆ ತಪ್ಪಿಸಿಕೊಂಡಿತ್ತು. ಅಧಿಕಾರಿಗಳು ಚಿರತೆಗಾಗಿ ಹುಡುಕಾಡಿದ ಮೇಲೆ ಚಿರತೆಯ ಮೃತದೇಹ ಪತ್ತೆಯಾಗಿತ್ತು. ಚಿರತೆಯ ದೇಹದ ಮೇಲೆ ಗುಂಡಿನ ಗುರುತು ಇದ್ದು, ಇದು ಅಧಿಕಾರಿಗಳೇ ಮಾಡಿದ ಕೊಲೆ ಎಂದು ಸ್ಥಳೀಯರು, ಪ್ರಾಣಿ ಪ್ರಿಯರು ಹಾಗೂ ಪರಿಸರವಾದಿಗಳು ಆರೋಪಿಸಿದ್ದಾರೆ. ಕಳೆದ ಒಂದು ವಾರದ ಹಿಂದಷ್ಟೇ ತರೀಕೆರೆ ತಾಲೂಕಿನ ಮುಂಡ್ರೆ ಗ್ರಾಮದ ಬಳಿ ಕೊಟ್ಟಿಗೆಯಲ್ಲಿದ್ದ 5 ವರ್ಷದ ಬಾಲಕಿಯನ್ನು ಚಿರತೆ ಹೊತ್ತೊಯ್ದಿತ್ತು. ನಿನ್ನೆ ಮತ್ತೊಬ್ಬ ಯುವಕನ ಮೇಲೆ ದಾಳಿ ಮಾಡಿದ್ದು ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗದ ರೈತರು ಚಿರತೆ ಹಾವಳಿಯಿಂದ ಹೈರಾಣಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು