3:57 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ತರೀಕೆರೆ: ಮನೆಯೊಳಗೆ ಪಟಾಕಿ ಸಿಡಿದು ಯುವಕ ಸಾವು: 4 ಮಂದಿಗೆ ಗಾಯ; ಓರ್ವ ಗಂಭೀರ

15/11/2023, 13:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರೀಕೆರೆ ತಾಲೂಕಿನ ಸುಣ್ಣದಹಳ್ಳಿಯ ಮನೆಯೊಂದರಲ್ಲಿ ಪಟಾಕಿ ಸಿಡಿದು ಓರ್ವ ಯುವಕ ಸಾವನ್ನಪ್ಪಿದ್ದು, ಇತರ 4 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ.
ಮೃತ ಯುವಕನನ್ನು ಪ್ರದೀಪ್ (30) ಎಂದು ಗುರುತಿಸಲಾಗಿದೆ. ಚೇರ್ ಕೆಳಗೆ ಪಟಾಕಿ ಇಟ್ಟುಕೊಂಡು ಯುವಕ ಕೂತಿದ್ದ. ಪಟಾಕಿ ಸಿಡಿದ ರಭಸಕ್ಕೆ ಯುವಕ ನೆಲದಿಂದ 5 ಅಡಿ ಮೇಲಕ್ಕೆ ಹಾರಿ ಬಿದ್ದಿದ್ದ. ಕಲ್ಲು ಆಟಂಬಾಂಬ್ ಪಟಾಕಿಯನ್ನು ಚೇರ್ ಕೆಳಗೆ ಇಟ್ಟುಕೊಂಡು ಪ್ರದೀಪ್ ಕುಳಿತಿದ್ದ. ಪಟಾಕಿ ಕಿಡಿ ತಾಗಿ ಚೀಲದಲ್ಲಿದ್ದ ಅಡಿಕೆಗೋಟು ಪಟಾಕಿಗಳು ಬ್ಲಾಸ್ಟ್ ಆಗಿವೆ. ದೇಹದ ಸೂಕ್ಷ್ಮ ಜಾಗಕ್ಕೆ ಗಂಭೀರ ಗಾಯಗಳಾಗಿ ಪ್ರದೀಪ್ ಮೃತಪಟ್ಟಿದ್ದಾರೆ.
ಪ್ರದೀಪ್ ಜೊತೆಗಿದ್ದ ಮತ್ತೋರ್ವ ಯುವಕನಿಗೆ ಗಂಭೀರ ಗಾಯವಾಗಿದೆ.
ಮೂವರು ಮಕ್ಕಳಿಗೂ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲ್ಲು ಆಟಂಬಾಂಬ್ ಸಿಡಿದ ರಭಸಕ್ಕೆ ಮನೆಯ ಗ್ಲಾಸ್ ಗಳು ಪುಡಿ-ಪುಡಿಯಾಗಿವೆ. ತರೀಕೆರೆ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು