8:43 AM Wednesday7 - January 2026
ಬ್ರೇಕಿಂಗ್ ನ್ಯೂಸ್
ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್…

ಇತ್ತೀಚಿನ ಸುದ್ದಿ

ಟಾಟಾ ಏಸ್ ಪಲ್ಟಿ: ಇಬ್ಬರು ಯುವಕರು ದಾರುಣ ಸಾವು; 3 ಮಂದಿಗೆ ಗಾಯ

07/09/2024, 21:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಗಣಪತಿ ತರಲು ಹೋಗುತ್ತಿದ್ದ ಟಾಟಾ ಏಸ್ ಆಟೋ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ.
ಮೃತಪಟ್ಟವರನ್ನು ಶ್ರೀಧರ್ (20) ಹಾಗೂ ಧನುಷ್ (20) ಎಂದು ಗುರುತಿಸಲಾಗಿದೆ.
ಗಣಪತಿ ತರಲೆಂದು ಟಾಟಾ ಏಸ್ ಆಟೋದಲ್ಲಿ 9 ಜನ ಯುವಕರು ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಅಸ್ಪತ್ರೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಹಾಗೂ ಗಾಯಾಳುಗಳೆಲ್ಲಾ ಲಿಂಗದಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ.
ಮೂವರು ಯುವಕರಿಗೆ ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು