ಇತ್ತೀಚಿನ ಸುದ್ದಿ
ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಉಚ್ಚಾಟನೆ
29/04/2024, 18:52
ಶಿವಮೊಗ್ಗ(reporterkarnataka.com): ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಶಿವಮೊಗ್ಗದಲ್ಲಿ ಮಾಧ್ಯಮ ಜತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಈ ವಿಷಯ ತಿಳಿಸಿದರು.
ಪ್ರಕರಣದ ತೀವ್ರತೆ ಬಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಜತೆ ಚರ್ಚೆ ನಡೆಸಲಾಗಿದೆ. ದೇವೇಗೌಡರು ಪ್ರಜ್ವಲ್ ರೇವಣ್ಣ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.