3:26 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ದೇರೆಬೈಲ್‌ ಬ್ಲೂಬೆರ್ರಿ ಹಿಲ್ಸ್ ನಲ್ಲಿ ಟೆಕ್ ಪಾರ್ಕ್: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಸಂತಸ

10/10/2025, 13:25

ಮಂಗಳೂರು(reporterkarnataka.com): ನಗರದ ದೇರೆಬೈಲ್‌ ಬ್ಲೂಬೆರ್ರಿ ಹಿಲ್ಸ್ ರಸ್ತೆಯಲ್ಲಿ
ಟೆಕ್ ಪಾರ್ಕ್ ನಿರ್ಮಿಸಲು ರಾಜ್ಯ ಸಚಿವ ಸಂಪುಟ ನಿರ್ಣಯಿಸಿರುವುದು ಸ್ವಾಗತಾರ್ಹ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ದೇರೆಬೈಲ್‌ನ ಬ್ಲೂಬೆರ್ರಿ ಹಿಲ್ಸ್ ರಸ್ತೆಯ ಸರ್ವೇ ನಂಬರ್ 129,113ರ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್ ಪಾರ್ಕ್ ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿಯಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ (ಡಿಬಿಎಫ್‌ಒಟಿ) ಆಧಾರದ ಮೇಲೆ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯಿಸಿರುವುದು ಸ್ವಾಗತಾರ್ಹ. ಇದರಿಂದ ಕರಾವಳಿಯಲ್ಲಿ ಸಹಸ್ರಾರು ಮಂದಿಗೆ ಉದ್ಯೋಗಾವಕಾಶ ಲಭಿಸಲಿದೆ. ಟೆಕ್ ಪಾರ್ಕ್ ನಿರ್ಮಾಣಕ್ಕೆ ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೃತಜ್ಞತೆಗಳು ಎಂದು ಪದ್ಮರಾಜ್ ಆರ್.ಪೂಜಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು