11:44 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Fly91 ವಿಮಾನದಲ್ಲಿ ತಾಂತ್ರಿಕ ದೋಷ: ಹುಬ್ಬಳ್ಳಿ ಏರ್ ಪೋರ್ಟ್ ನಲ್ಲಿ ತಪ್ಪಿದ ಮಹಾದುರಂತ

20/04/2026, 11:44

ಹುಬ್ಬಳ್ಳಿ(reporterkarnataka.com): ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಬರುತ್ತಿದ್ದ Fly91 ವಿಮಾನವು ತಾಂತ್ರಿಕ ದೋಷ ಅಥವಾ ಹವಾಮಾನ ವೈಪರೀತ್ಯದಿಂದಾಗಿ ಲ್ಯಾಂಡ್ ಆಗಲು ವಿಫಲವಾಯಿತು. ಸುಮಾರು ನಾಲ್ಕು ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಡಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ ವಿಮಾನ, ಅಂತಿಮವಾಗಿ ಬೆಂಗಳೂರಿನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಯಿತು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಹಾದುರಂತವೊಂದು ತಪ್ಪಿದ್ದು, ನೂರಾರು ಪ್ರಯಾಣಿಕರು ಬದುಕುಳಿದಿದ್ದಾರೆ. ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಸುಮಾರು ನಾಲ್ಕು ಗಂಟೆಗಳ ಆಕಾಶದಲ್ಲಿ ಸುತ್ತಿದೆ. ಕೊನೆಗೆ ವಿಮಾನ ಬೆಂಗಳೂರಿನ ಏರ್ಪೋಟ್‌ನಲ್ಲಿ ಸಂಜೆ 7.30ಕ್ಕೆ ಲ್ಯಾಂಡ್ ಆಗಿದೆ.
ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಬರುತ್ತಿದ್ದ Fly91 ಏರ್ ಲೈನ್ಸ್ IC3401 (ATRTURBOPROP AT7) ನಿಗದಿಯಂತೆ ಸಂಜೆ 4.30ಕ್ಕೆ ಲ್ಯಾಂಡ್ ಆಗಬೇಕಿತ್ತು. ವಿಮಾನದಲ್ಲಿ ತಾಂತ್ರಿಕದೋಷ ಕಾಣಿಸಿಕೊಂಡ ಹಿನ್ನೆಲೆ ಮುಂಡಗೋಡ, ದಾವಣಗೆರೆ , ಶಿವಮೊಗ್ಗ ಆಗಸದಲ್ಲಿಯೇ ಸುತ್ತಾಡಿದೆ. ಇದೇ ವೇಳೆ ವಿಮಾನ ಪೈಲಟ್‌ನ ನಿಯಂತ್ರಣ ಕಳೆದುಕೊಂಡಿತ್ತು ಎಂಬ ಮಾತುಗಳು ಸಹ ಕೇಳಿ ಬಂದಿವೆ.
ಸುಮಾರು ಸಮಯ ವಿಮಾನ ಸುತ್ತಾಟದಿಂದ ಆತಂಕಗೊಂಡ ಪ್ರಯಾಣಿಕರು ಕಣ್ಣೀರು ಹಾಕುತ್ತಾ ತಮ್ಮ ಕುಟುಂಬಸ್ಥರಿಗೆ ವಿಡಿಯೋ ಸಂದೇಶ ರವಾನಿಸಿದ್ದಾರೆ. ಕೆಲ ಪ್ರಯಾಣಿಕರು ಭಯದಿಂದ ಕಣ್ಣೀರು ಹಾಕಿದ್ದಾರೆ.ಪೈಲಟ್ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಆರೋಪ ಕೇಳಿ ಬಂದಿದೆ.
ಕೆಲ ಪ್ರಯಾಣಿಕರು ನಮ್ಮನ್ನು ವಾಪಸ್‌ ಹೈದಾರಾಬಾದ್‌ಗೆ ಕರೆದುಕೊಂಡು ಹೋಗಿ, ಇಲ್ಲವಾದ್ರೆ ಸಮೀಪದ ಬೆಳಗಾವಿ ಅಥವಾ ಬೆಂಗಳೂರಿನ ನಿಲ್ದಾಣದಲ್ಲಾದ್ರೂ ವಿಮಾನ ಲ್ಯಾಂಡ್ ಮಾಡಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ವಿಮಾನದಲ್ಲಿ ಏನಾಗ್ತಿದೆ ಎಂಬುದರ ಬಗ್ಗೆ ನಮಗೆಲ್ಲರಿಗೂ ಮಾಹಿತಿ ನೀಡಬೇಕು ಎಂದು ಪ್ರಯಾಣಿಕರೊಬ್ಬರು ಸಿಬ್ಬಂದಿ ಬಳಿ ಮನವಿ ಮಾಡಿಕೊಂಡಿದ್ದಾರೆ.
ಹವಾಮಾನ ವೈಪರೀತ್ಯದಿಂದಾಗಿ ಲ್ಯಾಂಡಿಂಗ್ ಮಾಡಲು ಸಾಧ್ಯವಾಗುತ್ತಿಲ್ಲ. ನಿಮ್ಮೆಲ್ಲರ ಸುರಕ್ಷತೆಯೇ ನಮ್ಮೆಲ್ಲರ ಮೊದಲ ಆದ್ಯತೆಯಾಗಿದ್ದು, ಯಾರೂ ಆತಂಕಕ್ಕೊಳಗಾಗಬೇಡಿ. ಸೂಚಿಸಲಾಗುತ್ತಿರುವ ನಿಯಮಗಳನ್ನು ಪಾಲನೆ ಮಾಡಿಕೊಳ್ಳಿ ಎಂದು ಸಿಬ್ಬಂದಿ ಪ್ರಯಾಣಿಕರಿಗೆ ಹೇಳುತ್ತಿರೋದು ವಿಡಿಯೋದಲ್ಲಿ ಸೆರೆಯಾಗಿದೆ. ಅಂತಿಮವಾಗಿ ವಿಮಾನ ಸುರಕ್ಷಿತವಾಗಿ ಬೆಂಗಳೂರಿನಲ್ಲಿ ಲ್ಯಾಂಡ್ ಆಗಿದ್ದರಿಂದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. Fly91 ಏರ್ ಲೈನ್ಸ್ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು