1:36 PM Wednesday19 - November 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಬಿಜೆಪಿ ಮುಖಂಡ ಗುಂಡೇಟಿಗೆ ಬಲಿ: ಶಿಕಾರಿ ವೇಳೆ  ನಡೆಯಿತೇ ಈ ಅನಾಹುತ?

27/03/2022, 17:00

ಶಿವಮೊಗ್ಗ(reporterkarnataka.com): ಗುಂಡು ತಗುಲಿ ಬಿಜೆಪಿ ಮುಖಂಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಾಂತರಾಜ್ (44) ಎಂಬವರು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕಿನ ಅಂಬುತೀರ್ಥ ಬಳಿ ನಡೆದಿದ್ದು, ಘಟನಾ ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ದೌಡಾಯಿಸಿದ್ದಾರೆ.

ಅಂಬುತೀರ್ಥ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ಗುಂಡೇಟು ತಗುಲಿದ ಕಾಂತರಾಜ್ ಅವರು ಬಿದ್ದು ಚೀರಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಅವರನ್ನು ತೀರ್ಥಹಳ್ಳಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ.

ಕಾಂತರಾಜ್ ಅವರು ಅಂಬುತೀರ್ಥ ಬಳಿ ಪ್ರಾಣಿ ಶಿಕಾರಿಗೆ ತೆರಳಿದ್ದರು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಈ ಮಧ್ಯೆ ಸುದ್ದಿ ತಿಳಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು