10:06 AM Saturday11 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ… ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: 2 ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು

12/08/2024, 23:11

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಕಾಲೇಜು ವಿದ್ಯಾರ್ಥಿಗಳಿಗೆ ಪಟ್ಟಣದ ವಿವಿಧ ಭಾಗದಲ್ಲಿನ ಕಾಲೇಜು ಸಮೀಪದ ಪೆಟ್ಟಿಗೆ ಅಂಗಡಿಗಳಲ್ಲಿ ಸಿಗರೇಟ್ ಹಾಗೂ ಪಾನ್ ಪರಾಕ್ ನೀಡುತ್ತಿದ್ದ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ತೀರ್ಥಹಳ್ಳಿಯ ಪೊಲೀಸ್ ಅಧಿಕಾರಿ, ಡಿವೈಎಸ್’ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ದಾಳಿ ನೆಡೆಸಿ ಎರಡು ಅಂಗಡಿಗಳ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.
ಪಟ್ಟಣದ ಯಡೇಹಳ್ಳಿಕೆರೆ ಸಮೀಪದ ಸಹ್ಯಾದ್ರಿ ಪಾಲಿಟೇಕ್ನಿಕ್ ಕಾಲೇಜು ಅಕ್ಕ ಪಕ್ಕದ ಎರಡು ಪೆಟ್ಟಿಗೆ ಅಂಗಡಿಗಳಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಸಿಗರೇಟ್ ಹಾಗೂ ಪಾನ್ ಪರಾಕ್ ನೀಡುತ್ತಿರುವ ಬಗ್ಗೆ ದೂರು ಕೇಳಿ ಬಂದಿತ್ತು. ಸ್ಥಳಕ್ಕೆ ಭೇಟಿ ನೀಡಿ ಮಾದಕ ವಸ್ತು ನೀಡುತ್ತಿದ್ದಾರೆ ಎಂಬ ಕಾರಣದಿಂದ ಎರಡು ಅಂಗಡಿ ಮಾಲೀಕರ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.
ಉಳಿದಂತೆ ಪಟ್ಟಣದ ವಿವಿಧ ಭಾಗದಲ್ಲಿ ಕಾಲೇಜು ಸಮೀಪ ಇರುವ ಅಂಗಡಿಗಳಲ್ಲಿ ಮಕ್ಕಳಿಗೆ ಸಿಗರೇಟ್ ಹಾಗೂ ಪಾನ್ ಪರಾಕ್ ಸೇರಿ ಮಾದಕ ವಸ್ತು ಮಾರಾಟ ಮಾಡುವುದು ತಿಳಿದು ಬಂದರೆ ಕೂಡಲೇ ಮುಟ್ಟುಗೊಲು ಮಾಡಿಕೊಳ್ಳುವುದರ ಜೊತೆಗೆ ಕೇಸ್ ದಾಖಲು ಮಾಡಲಾಗುತ್ತದೆ ಎಂದು
ಡಿವೈಎಸ್’ಪಿ ಗಜಾನನ ವಾಮನ ಸುತಾರ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು