7:01 PM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯಲ್ಲಿ ಮಣ್ಣು ಜರಿತ: ವಾಹನ ಸಂಚಾರಕ್ಕೆ ನಿಷೇಧ

26/07/2024, 23:58

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169ಎ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯಲ್ಲಿ ಮತ್ತೆ ನಿಧಾನ ರೀತಿಯಲ್ಲಿ ಮಣ್ಣು ಜರಿಯುತ್ತಿರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಈಗಾಗಲೇ ತಡೆಗೋಡೆ ಕುಸಿದು ಮಣ್ಣು ರಸ್ತೆಯ ಮೇಲೆ ಬಂದಿತ್ತು. ಆದರೂ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿತ್ತು. ಆದರೆ ನಿರಂತರ ಗಾಳಿ ಹಾಗೂ ಮಳೆಯ ಅಬ್ಬರದಿಂದ ಮತ್ತೆ ಮಣ್ಣು ಜರಿಯಲು ಆರಂಭವಾಗಿದ್ದು ವಾಹನ ಚಾಲಕರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರವನ್ನು ಬ್ಯಾರಿಕೆಡ್ ಹಾಕಿ ಬಂದ್ ಮಾಡಲಾಗಿದೆ.
ಸ್ಥಳದಲ್ಲಿ ತೀರ್ಥಹಳ್ಳಿ ಡಿವೈಎಸ್’ಪಿ ಗಜಾನನ ವಾಮನ ಸುತಾರ, ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ನವೀನ್ ರಾಜ್ ಸೇರಿದಂತೆ ಅನೇಕ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಂ ಹೂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು