ಇತ್ತೀಚಿನ ಸುದ್ದಿ
ತೀರ್ಥಹಳ್ಳಿ: ನೂತನ ಪೊಲೀಸ್ ಠಾಣೆ, ವಸತಿಗೃಹ 13ರಂದು ಉದ್ಘಾಟನೆ; ಗೃಹ ಸಚಿವ ಡಾ. ಪರಮೇಶ್ವರ್ ಚಾಲನೆ
11/07/2024, 13:36
ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ತೀರ್ಥಹಳ್ಳಿ ಪಟ್ಟಣದ ರಥಬೀದಿಯಲ್ಲಿ ನಿರ್ಮಿಸಿರುವ ನೂತನ ಪೊಲೀಸ್ ಠಾಣೆ, ಪೊಲೀಸ್ ವಸತಿ ಗೃಹಗಳ ಉದ್ಘಾಟನೆಯನ್ನು ಕರ್ನಾಟಕ ರಾಜ್ಯದ ಗೃಹ ಸಚಿವರಾದ ಜಿ.ಪರಮೇಶ್ವರ್ ರವರು ಶನಿವಾರ ಉದ್ಘಾಟನೆ ಮಾಡಲಿದ್ದಾರೆ.
ಡಿವೈಎಸ್’ಪಿ, ಸಬ್ ಇನ್ಸ್ಪೆಕ್ಟರ್ ಗಳಿಗೆ ವಸತಿ ಗೃಹ ನೂತನವಾಗಿ ನಿರ್ಮಾಣ ಮಾಡಲಾಗಿದ್ದು ಪೊಲೀಸ್ ಠಾಣೆಯ ಜೊತೆಗೆ ವಸತಿ ಗೃಹಗಳ ಉದ್ಘಾಟನೆ ಕೂಡ ಶನಿವಾರ ಸಂಜೆ 4 ಗಂಟೆಗೆ ನಡೆಯಲಿದೆ. ನೂತನವಾಗಿ ನಿರ್ಮಿಸಿರುವ ವಸತಿ ಗೃಹಗಳಿಗೆ ಶುಕ್ರವಾರ ಸಂಜೆ ವಾಸ್ತು ಹೋಮ ಹವನಗಳು ಪೂಜೆ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ, ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ, ಮಾಜಿ ಶಿಕ್ಷಣ ಸಚಿವರಾದ ಕಿಮ್ಮನೆ ರತ್ನಾಕರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡರು ಭಾಗಿಯಾಗಲಿದ್ದಾರೆ.