4:35 PM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಮಕ್ಕಳ ಹಾಸ್ಟೆಲ್ ಊಟದಲ್ಲಿ ಹುಳ ಪ್ರತ್ಯಕ್ಷ: ಸೊಪ್ಪು, ಬೆಂಡೆಕಾಯಿ ಸಾಂಬಾರ್ ನಲ್ಲೂ ಹುಳ!

26/09/2024, 12:11

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಹಾಸ್ಟೆಲ್ ವೊಂದರ ಮಕ್ಕಳು ಊಟ ಮಾಡುವ ಊಟದಲ್ಲಿ ಹುಳ ಪ್ರತ್ಯಕ್ಷವಾಗಿದ್ದು ಅದನ್ನು ನೋಡಿದ ಮಕ್ಕಳು ಊಟವನ್ನು ಚೆಲ್ಲಿದ ಘಟನೆ ನಡೆದಿದೆ.
ಪಟ್ಟಣದ ಜೂನಿಯರ್ ಕಾಲೇಜು ಸಮೀಪದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿ ಪರ ಬಾಲಕರ ವಿದ್ಯಾರ್ಥಿ ನಿಲಯದ ಹಾಸ್ಟೆಲ್ ನಲ್ಲಿ ಬುಧವಾರ ರಾತ್ರಿ ಊಟಕ್ಕೆ ಕುಳಿತ ವಿದ್ಯಾರ್ಥಿಗಳಿಗೆ ಅನ್ನ ಹಾಗೂ ಸಾಂಬಾರ್ ನಲ್ಲಿ ಹುಳ ಕಂಡಿವೆ. ತಕ್ಷಣ ಅಲ್ಲಿನ ವಾರ್ಡನ್ ಬಳಿ ಮಾಹಿತಿ ನೀಡಿ ಊಟವನ್ನು ಮಾಡದೆ 70 ಜನ ಮಕ್ಕಳು ಊಟ ಚೆಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸರ್ಕಾರ ನೀಡಿದ್ದ ಅಕ್ಕಿಯಲ್ಲಿ ಹುಳ ಆಗಿತ್ತಾ? ಅಥವಾ ಅದನ್ನು ಅಡುಗೆ ಮಾಡುವ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿಗಳು ಗಮನಿಸಲಿಲ್ಲವೇ? ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕಾದ ಅಲ್ಲಿನ ಸಿಬ್ಬಂದಿಗಳು ನಿರ್ಲಕ್ಷ್ಯತನ ತೋರಿಸಿದ್ದಾರಾ? ಎಂಬ ಅನುಮಾನ ವ್ಯಕ್ತವಾಗಿದೆ.


ನಿನ್ನೆ ಸೊಪ್ಪಿನ ಸಾಂಬಾರ್ ನಲ್ಲೂ ಹುಳ ಇತ್ತು ಎಂದು ಹೇಳಲಾಗುತ್ತಿದ್ದು ಇಂದು ಬೆಂಡೆಕಾಯಿ ಸಾಂಬಾರ್ ನಲ್ಲೂ ಹುಳ ಕಂಡಿದೆ. ಸುಮಾರು 70ಕ್ಕೂ ಹೆಚ್ಚು ಮಕ್ಕಳು ಬುಧವಾರ ಹಾಸ್ಟೆಲ್ ನಲ್ಲಿ ಇದ್ದು ಮಕ್ಕಳ ಆರೋಗ್ಯವನ್ನು ಲೆಕ್ಕಿಸದೆ ಈ ರೀತಿ ನಿರ್ಲಕ್ಷ್ಯತನ ವಹಿಸಿರುವುದು ಸರಿಯಲ್ಲ ಎಂಬ ಮಾತು ಸಾರ್ವಜನಿಕರಿಂದ ಕೇಳಿಬಂದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸಂಬಂಧ ಪಟ್ಟ ಅಧಿಕಾರಿಗಳಾದ ಆಶಾಲತಾ ಅವರು ತಕ್ಷಣ ಸ್ಥಳಕ್ಕೆ ಬೇಟಿ ಮಾಡಿ ಕ್ರಮ ಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು