9:37 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ದನ ಅಡ್ಡ ಬಂದು ಬೈಕ್ ನಿಂದ ಬಿದ್ದ ಸವಾರನಿಗೆ ಗಾಯ

07/12/2024, 19:50

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಮೇಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳುವೆ ನರ್ಸರಿ ಎದುರು ರಸ್ತೆಯಲ್ಲಿ ದನವೊಂದು ಏಕಾಏಕಿ ಅಡ್ಡ ಬಂದ ಪರಿಣಾಮ ಬೈಕ್ ಸವಾರ ಬಿದ್ದು ಗಾಯಗೊಂಡ ಘಟನೆ ನಡೆದಿದೆ.
ಶನಿವಾರ ಮಧ್ಯಾಹ್ನ ತಳುವೆಯ ನರ್ಸರಿ ಬಳಿ ಈ ಅಪಘಾತವಾಗಿದ್ದು ಬೈಕ್ ಸವಾರನ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಗಾಯಾಳು ಭೀಮನಕಟ್ಟೆಯ ನಿವಾಸಿ ಎಂದು ತಿಳಿದು ಬಂದಿದ್ದು ಆತ ಕೊನೆ ಕೆಲಸ ಮಾಡುತ್ತಿದ್ದರು. ಇಂದು ಅಡಿಕೆ ತೋಟವೊಂದರಲ್ಲಿ ಅಡಿಕೆ ಕೊನೆ ತೆಗೆದು ವಾಪಾಸ್ ತೀರ್ಥಹಳ್ಳಿಗೆ ಬರುವ ವೇಳೆ ತಳುವೆ ಸಮೀಪ ಈ ಅವಘಡ ಸಂಭವಿಸಿದೆ.
ಬೈಕ್ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಆತನನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು