4:30 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಕ್ಯಾಲ್ಸಿಯಂ ಮಾತ್ರೆ ಸೇವಿಸಿದ 15 ಕಾಲೇಜು ವಿದ್ಯಾರ್ಥಿನಿಯರು ಅಸ್ವಸ್ಥ

07/08/2024, 18:17

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಸೊಪ್ಪುಗುಡ್ಡೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಯಾಲ್ಸಿಯಂ ಮಾತ್ರೆ ಸೇವಿಸಿದ್ದ 15 ಜನ ವಿದ್ಯಾರ್ಥಿನಿಯರು ವಾಂತಿ – ಬೇದಿಯಾಗಿ ಅಸ್ವಸ್ಥ ರಾದ ಘಟನೆ ನಡೆದಿದೆ.
ವೈದ್ಯರು ಸೂಚಿಸಿದಂತೆ ಕ್ಯಾಲ್ಸಿಯಂ ಮಾತ್ರೆ ವಿದ್ಯಾರ್ಥಿಗಳಿಗೆ ನೀಡಲಾಗಿತ್ತು. ಅದರಂತೆ ಮಧ್ಯಾಹ್ನದ ಊಟದ ನಂತರ ಸೇವಿಸಲು ಪ್ರಿನ್ಸಿಪಾಲ್ ವಿದ್ಯಾರ್ಥಿಗಳಿಗೆ ಹೇಳಿದ್ದರು. ಆದರೆ ಪ್ರಸ್ತುತ ಕಾಲೇಜು ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಇಲ್ಲದಿರುವುದರಿಂದ ಊಟಕ್ಕೆ ಮೊದಲೇ ವಿದ್ಯಾರ್ಥಿಗಳು ಮಾತ್ರೆ ಸೇವಿಸಿದ್ದು ಈ ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಮಾತನಾಡಿದ ಟಿಎಚ್ ಓ ಅನಿಕೇತನ್ ” ಮಾತ್ರೆಗಳನ್ನು ಊಟದ ಮೊದಲೇ ಸೇವನೆ ಹಾಗೂ ಗ್ಯಾಸ್ಟ್ರಿಕ್ ಇರುವವರಿಗೆ ಈ ಸಮಸ್ಯೆ ಕಾಡುವುದು ಸಹಜ. ವಿದ್ಯಾರ್ಥಿನಿಯರು ಹಾಗೂ ಪೋಷಕರು ಈ ಬಗ್ಗೆ ಹೆದರುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ಅದೇನೇ ಇರಲಿ ವಿದ್ಯಾರ್ಥಿಗಳು ಕೂಡ ಮಾತ್ರೆ ತೆಗೆದುಕೊಳ್ಳುವ ಬಗ್ಗೆ ಎಚ್ಚರಿಕೆ ವಹಿಸುವುದು ಹಾಗೂ ಕಾಲೇಜು ಆಡಳಿತ ಮಂಡಳಿ ಆಗಲಿ ಅಥವಾ ಹಾಸ್ಟೆಲ್ ನಲ್ಲೆ ಆಗಲಿ ಇದರ ಬಗ್ಗೆ ಹೆಚ್ಚಿನ ಗಮನ ವಹಿಸುವುದು ಒಳ್ಳೆಯದು ಎಂಬ ಮಾತು ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು