10:39 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವತಿಯಿಂದ ನಾಡಹಬ್ಬ ದಸರಾಕ್ಕೆ ದೇಣಿಗೆ ಹಸ್ತಾಂತರ

10/10/2024, 20:31

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಅತ್ಯಂತ ವಿಜೃಂಭಣೆಯಿಂದ ನಡೆಯುವ ನಾಡಹಬ್ಬ ದಸರಾಕ್ಕೆ ಪಟ್ಟಣ ಪಂಚಾಯಿತಿ ವತಿಯಿಂದ ತಾಲೂಕು ಆಡಳಿತ ವರ್ಗಕ್ಕೆ ಎರಡೂವರೆ ಲಕ್ಷ ರೂ ಮೊತ್ತದ ಚೆಕ್ ಅನ್ನು ಹಸ್ತಾಂತರ ಮಾಡಲಾಯಿತು.
ಎರಡನೇ ಮೈಸೂರು ಎಂದೇ ಖ್ಯಾತಿ ಪಡೆದಿದ್ದ ತೀರ್ಥಹಳ್ಳಿಯಲ್ಲಿ ನವರಾತ್ರಿ ಉತ್ಸವದ ದಸರಾ ಮಹೋತ್ಸವವೂ ಬಹಳ ವಿಜೃಂಭಣೆಯಿಂದ ನಡೆಯುತ್ತಿದ್ದು ಪಟ್ಟಣ ಪಂಚಾಯಿತಿ ಎಲ್ಲಾ ರೀತಿ ಯಲ್ಲೂ ಸಹಕಾರ ನೀಡುತ್ತಿದ್ದು, ಬನ್ನಿ ಮಂಟಪಕ್ಕೆ ಸಂಬಂಧಪಟ್ಟಂತೆ ಸುಣ್ಣ ಬಣ್ಣ ಹೊಡೆಯುವದಲ್ಲದೆ, ಜಂಗಲ್ ಕಟಿಂಗ್ ಸೇರಿದಂತೆ ಸಂಪೂರ್ಣವಾಗಿ ನೆಹರು ಉದ್ಯಾನವನದ ಬನ್ನಿ ಮಂಟಪ ಸುಂದರವಾಗಿ ಕಾಣುವಂತೆ ಪಟ್ಟಣ ಪಂಚಾಯತ್ ವಿಶೇಷ ಸಹಕಾರ ನಿಡುತ್ತಿದೆ.
ದಸರಾ ಉತ್ಸವಕ್ಕೆ ಎರಡುವರೆ ಲಕ್ಷ ರೂಪಾಯಿಗಳನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ರಹಮತುಲ್ಲಾ ಅಸಾದಿ, ಉಪಾಧ್ಯಕ್ಷರಾದ ಗೀತಾ ರಮೇಶ್ ಗುರುವಾರ ತಾಲೂಕು ಕಚೇರಿಗೆ ತೆರಳಿ ಜಿಲ್ಲಾ ಉಪ ವಿಭಾಗ ಅಧಿಕಾರಿಯವರಿಗೆ ಚೆಕ್ ಹಸ್ತಾಂತರ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು