11:07 AM Saturday10 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಅತ್ಮಹತ್ಯೆ

10/10/2024, 12:25

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಸಂಘ ಸಂಸ್ಥೆಯಲ್ಲಿ ಎರಡು ಲಕ್ಷ ಹಾಗೂ ಇತರೆ ಕೈ ಸಾಲ ಮಾಡಿಕೊಂಡಿದ್ದ ರೈತನೋರ್ವ ಇತ್ತ ಬೆಳೆಯಲ್ಲೂ ನಷ್ಟ ಅನುಭವಿಸಿ ಸಾಲ ತಿರಿಸಲಾಗದೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ತೀರ್ಥ ಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಣ್ಣದಮನೆಯ ನೇಮನಾಯ್ಕ (60 ) ಎಂಬ ರೈತ ಅಡಿಕೆಗೆ ಎಲೆಚುಕ್ಕಿ ರೋಗ ಹಾಗು ಕೊಳೆ ರೋಗದಿಂದ ಬೇಸತ್ತು ಜೀವನ ನಿರ್ವಹಣೆಗಾಗಿ ಸಂಘ ಸಂಸ್ಥೆಯಲ್ಲಿ ಹಾಗೂ ಕೈ ಸಾಲ ತೀರಿಸಲು ದಿಕ್ಕು ತೋಚದೇ ಬುಧವಾರ ಸಂಜೆ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದಾರೆ.
ನಂತರ ನೇಮ ನಾಯ್ಕ್ ಅವರನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಬುಧವಾರ ರಾತ್ರಿ 10 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು