9:32 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ವಾಗ್ದೇವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮಿಥಾಲಿ ಮತ್ತು ಸಾರ್ಥಕ್ ಅಥ್ಲೆಟಿಕ್ ನಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

21/09/2024, 22:00

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಪ್ರಸಿದ್ಧ ಶಿಕ್ಷಣ ಸಂಸ್ಥೆಯಲ್ಲಿ ಒಂದಾದ ವಾಗ್ದೇವಿ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯ ವಿದ್ಯಾರ್ಥಿಗಳು ಅಥ್ಲೇಟಿಕ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶುಕ್ರವಾರ ಶಾಲಾ ಶಿಕ್ಷಣ ಇಲಾಖೆ ಹಾಗೂ ಸಹಾದ್ರಿ ಪ್ರೌಢಶಾಲೆಯ
ಸಂಯುಕ್ತಾಶ್ರಯದಲ್ಲಿ ಡಾ|| ಯು.ಆರ್. ಅನಂತಮೂರ್ತಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ನಡೆದ 17 ವರ್ಷ ವಯೊಮಿತಿಯೊಳಗಿನ ತಾಲೂಕು ಮಟ್ಟದ ಬಾಲಕ ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ,ವಾಗ್ದೇವಿ ಆಂಗ್ಲಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಮಿಥಾಲಿ ಟಿ.ಎಸ್. ಬಾಲಕಿಯರ ವಿಭಾಗದ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನವನ್ನು ಹಾಗೂ 10ನೆಯ ತರಗತಿ ವಿದ್ಯಾರ್ಥಿ ಸಾರ್ಥಕ್ ಕೆ. ಎಸ್. ಬಾಲಕರ ವಿಭಾಗದ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇದಲ್ಲದೆ 9ನೇ ತರಗತಿಯ ಸಾನ್ನಿ ಜಾವಲಿನ್ ಎಸೆತದಲ್ಲಿ ಶೃತಿಯಸ್ಥಾನವನ್ನು ಪಡೆದು ಶಾಲೆಗೆ ಮತ್ತು ಪೋಷಕರಿಗೆ ಕೀರ್ತಿಯನ್ನು ತಂದಿರುತ್ತಾರೆ.ವಿದ್ಯಾರ್ಥಿಗಳ ಈ ಸಾಧನೆಯನ್ನು ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ಅಭಿನಂದಿಸಿ ಮುಂದಿನ ಕ್ರೀಡಾಕೂಟಕ್ಕೆ ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು