3:31 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಎದೆ ನೋವು ಚಿಕಿತ್ಸೆಗೆಂದು ಆಸ್ಪತ್ರೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವಕ ರಸ್ತೆಗೆ ಬಿದ್ದು ಸ್ಥಳದಲ್ಲೇ ಸಾವು

04/09/2024, 21:56

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಸಮೀಪದ ಹೊದಲದ ಕೌದಳ್ಳಿ ಬಳಿಯ ಹೊಸಗದ್ದೆಯ ಯುವಕನೋರ್ವ ವಾಹನ ಚಾಲನೆ ಮಾಡುವಾಗ ರಸ್ತೆಯಲ್ಲಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ.
ಸಂತೋಷ (34 ) ಮೃತ ಪಟ್ಟ ದುರ್ದೈವಿ. ಇಂದು ಮಧ್ಯಾಹ್ನದ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ನಂತರ ಆಸ್ಪತ್ರೆಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ಸ್ಕೂಟಿಯಲ್ಲಿಯೇ ಹೊರಟು ಹೊದಲದ ಅಂಗಡಿಯೊಂದರ ಬಳಿ ಬಂದು ಕುಳಿತಿದ್ದಾರೆ. ನಂತರ ಅಲ್ಲಿಂದ ತೀರ್ಥಹಳ್ಳಿ ಆಸ್ಪತ್ರೆಗೆ ಹೊರಟಿದ್ದಾರೆ.
ವಡ್ಡಿನಬೈಲು ಸಮೀಪ ಬರುವ ವೇಳೆ ನಿಯಂತ್ರಣ ತಪ್ಪಿ ಸ್ಕೂಟಿಯಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಸ್ಕೂಟಿಯೂ ಸಹ ಅವರ ಮೇಲೆ ಬಿದ್ದಿದೆ. ಈ ವೇಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅವರ ಪತ್ನಿ ಬಾಣಂತಿಯಾಗಿದ್ದು ಮೂರು ತಿಂಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದರು. ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನೆಡೆಸಲಾಗುತ್ತಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು