4:38 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಕಾಡಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಕಾರು, ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : 5 ಮಂದಿ ಬಂಧನ; ಹಾಗಾದರೆ ಆ ಕೊಲೆಗಾರರು ಯಾರು?

01/10/2021, 22:36

ತೀರ್ಥಹಳ್ಳಿ(reporterkarnataka.com): ದಟ್ಟ ಕಾಡಿನ ನಡುವೆ ಸುಟ್ಟ ಸ್ಥಿತಿಯಲ್ಲಿ ಕಾರು ಹಾಗೂ ಕರಕಲಾದ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮೃತ ವ್ಯಕ್ತಿಯ ಮಕ್ಕಳು, ಪತ್ನಿ ಸೇರಿ ಐವರನ್ನು ಬಂಧಿಸಲಾಗಿದೆ. 

ಮೃತ ವ್ಯಕ್ತಿಯನ್ನು ಸಾಗರ ತಾಲೂಕಿನ ಆಚಾಪುರ ಗ್ರಾಮದ ಮುಸ್ಲಿಂಪೇಟೆಯ ನಿವಾಸಿ ವಿನೋದ್ (45 ) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮನೆಯವರೇ ಸೇರಿ ವ್ಯಕ್ತಿಯ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.ವಿನೋದ್ ಅವರನ್ನು ಕೊಲೆಗೈದು, ಮೃತದೇಹವನ್ನು ಕಾರಿನಲ್ಲಿ ಕಾಡಿಗೆ ತಂದು, ಮೃತದೇಹ ಸಹಿತ ಕಾರಿಗೆ ಬೆಂಕಿ ಹಚ್ಚಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಸುಟ್ಟ ಕಾರು, ಕರಕಲಾದ ಶವ ಪತ್ತೆಯಾಗಿರುವ ಸಂಬಂಧ ಜೇಡಿಕುಣಿ ಗ್ರಾಮ ಪಂಚಾಯಿತಿ ಸದಸ್ಯರು ದೂರು ನೀಡಿದ್ದರು. ತನಿಖೆ ನಡೆಸಿದ ತೀರ್ಥಹಳ್ಳಿ ಪೊಲೀಸರಿಗೆ ಮೃತ ವಿನೋದ್‌ನ ಹೆಂಡತಿ, ಇಬ್ಬರು ಗಂಡು ಮಕ್ಕಳು, ಹೆಂಡತಿಯ ಅಕ್ಕನ ಮಗ ಮತ್ತು ಮೃತನ ತಮ್ಮನ ಕೈವಾಡ ಇರುವುದು ತಿಳಿದು ಬಂದಿದೆ.

ಸೆ. 25ರಂದು ಐವರು ಆರೋಪಿಗಳು ವಿನೋದ್ ಕೊಲೆಗೆ ಸಂಚು ರೂಪಿಸಿದ್ದಾರೆ. ಸೆ. 26ರಂದು ಬೆಳಗ್ಗೆ ಆನಂದಪುರದ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಖರೀದಿಸಿಟ್ಟುಕೊಂಡಿದ್ದರು. ಸೆ.26ರಂದು ರಾತ್ರಿ 8.30ರ ಹೊತ್ತಿಗೆ ಮನೆಯಲ್ಲೇ ತಂತಿ ಬಿಗಿಯುವ ರಾಡ್, ಸುತ್ತಿಗೆ, ಕಬ್ಬಿಣದ ರಾಡ್‌ನಿಂದ ಹೊಡೆದು ವಿನೋದ್ ಅವರ ಕೊಲೆ ಮಾಡಲಾಗಿದೆ. ವಿನೋದ್ ಬಳಸುತ್ತಿದ್ದ ಕಾರಿನಲ್ಲೇ ಅವರ ಮೃತದೇಹವನ್ನು ಸಾಗಿಸಲಾಗಿದೆ. ತನಿಖೆ ವೇಳೆ ಪೊಲೀಸರಿಗೆ ಅನುಮಾನ ಬಾರದಿರಲಿ ಎಂದು ಆರೋಪಿಗಳು ತಮ್ಮ ಮೊಬೈಲನ್ನು ಸ್ವಿಚ್ ಆಫ್ ಮಾಡಿದ್ದರು. ಮನೆಯಲ್ಲೇ ಮೊಬೈಲ್ ಗಳನ್ನು ಇಟ್ಟು ಹೋಗಿದ್ದರು.

ಕಾರಿನಲ್ಲಿ ಯಡೇಹಳ್ಳಿ, ರಿಪ್ಪನ್ ಪೇಟೆ, ಹುಂಚದಕಟ್ಟೆ, ಶಂಕ್ರಳ್ಳಿ, ಮಲ್ಲೇಸರ ಮಾರ್ಗವಾಗಿ ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಗ್ರಾಮದ ಹುಣಸೆಕೊಪ್ಪ ಅರಣ್ಯ ಪ್ರದೇಶಕ್ಕೆ ಮೃತದೇಹ ತಂದಿದ್ದಾರೆ. ಚಾಲಕನ ಸೀಟಿನಲ್ಲಿ ಮೃತದೇಹವನ್ನು ಇರಿಸಿದ್ದಾರೆ. ಮೊದಲೇ ಖರೀದಿಸಿಟ್ಟಿದ್ದ ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ ಹಚ್ಚಿದ್ದಾರೆ. ಕಾರಿನ ನಂಬರ್ ಪ್ಲೇಟ್ ಮತ್ತು ವಿನೋದ್ ಬಳಸುತ್ತಿದ್ದ ಮೊಬೈಲ್ ಫೋನನ್ನು ದಾರಿ ಮಧ್ಯೆ ಎಸೆದು ಆರೋಪಿಗಳು ಮನೆಗೆ ಮರಳಿದ್ದರು.

ತನಿಖೆ ವೇಳೆ ಮನೆಯವರ ಮೇಲೆಯೇ ಅನುಮಾನಗೊಂಡ ಪೊಲೀಸರು, ವಿಚಾರಣೆ ತೀವ್ರಗೊಳಿಸಿದ್ದರು. ಈ ವೇಳೆ ವಿನೋದ್ ಕೊಲೆಯ ಸಂಪೂರ್ಣ ಮಾಹಿತಿ ಬಹಿರಂಗಗೊಂಡಿದೆ. 

ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪೊಲೀಸರು ಬಂಧಿತ ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು